ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

ನಿರ್ಬಂಧ ಆದೇಶ: ರಾಷ್ಟಕ್ಕೆ ಏನಾದರೂ ಆದರೆ ನ್ಯಾಯಾಲಯದ ವ್ಯವಸ್ಥೆಯನ್ನು ದೂಷಿಸಿ- ಟ್ರಂಪ್

ಮುಸ್ಲಿಂ ರಾಷ್ಟ್ರಗಳ ಪ್ರಜೆಗಳ ಮೇಲೆ ಹೇರಲಾಗಿದ್ದ ನಿರ್ಬಂಧ ಆದೇಶಕ್ಕೆ ನ್ಯಾಯಾಲಯ ನಕಾರ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಮುಂದೆ ರಾಷ್ಟ್ರದಲ್ಲಿ ಏನಾದರೂ ಕೆಟ್ಟ ಬೆಳವಣಿಗೆಗಳು...

ವಾಷಿಂಗ್ಟನ್: ಮುಸ್ಲಿಂ ರಾಷ್ಟ್ರಗಳ ಪ್ರಜೆಗಳ ಮೇಲೆ ಹೇರಲಾಗಿದ್ದ ನಿರ್ಬಂಧ ಆದೇಶಕ್ಕೆ ನ್ಯಾಯಾಲಯ ನಕಾರ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಮುಂದೆ ರಾಷ್ಟ್ರದಲ್ಲಿ ಏನಾದರೂ ಕೆಟ್ಟ ಬೆಳವಣಿಗೆಗಳು ಕಂಡು ಬಂದರೆ ನ್ಯಾಯಾಲಯದ ವ್ಯವಸ್ಥೆಯನ್ನು ದೂಷಸಿ ಎಂದು ಸೋಮವಾರ ಹೇಳಿದ್ದಾರೆ.

ನಿರ್ಬಂಧ ಆದೇಶಕ್ಕೆ ನ್ಯಾಯಾಲಯ ನಕಾರ ಪ್ರತಿಕ್ರಿಯೆ ನೀಡಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನ್ಯಾಯಾಧೀಶಕರು ದೇಶವನ್ನು ಇಂತಹ ದೊಡ್ಡ ಗಂಡಾಂತಕ್ಕೆ ಸಿಲುಕಿಸಿದ್ದಾರೆಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ರಾಷ್ಟ್ರದಲ್ಲಿ ಕೆಟ್ಟ ಬೆಳವಣಿಗೆಗಳು ಕಂಡುಬಂದರೆ ನ್ಯಾಯಾಧೀಶರನ್ನು ದೂಷಿಸಿ ಎಂದು ಹೇಳಿದ್ದಾರೆ.

ವಿದೇಶದಿಂದ ಬರುವ ಪ್ರಜೆಗಳನ್ನು ಕಟ್ಟುನಿಟ್ಟಾಗಿ ಹಾಗೂ ಬಹಳ ಎಚ್ಚರಿಕೆಯಿಂದ ಪರಿಶೀಲನೆ ನಡೆಸುವಂತೆ ತವರಿನಲ್ಲಿರುವ ಭದ್ರತಾ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದೆ. ಇದೀಗ ಅವರ ಕೆಲಸವನ್ನು ನ್ಯಾಯಾಲಯ ಬಹಳ ಸುಲಭವಾಗಿದೆ ಎಂದು ಸರಣಿ ಟ್ವೀಟ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಡೊನಾಲ್ಡ್ ಟ್ರಂಪ್ ಅವರು ಈ ಹಿಂದೆ ಕಠಿಣ ಹಾಗೂ ವಿವಾದಾತ್ಮಕ ನಿರ್ಧಾರವೊಂದನ್ನು ಕೈಗೊಂಡಿದ್ದರು. ಭಯೋತ್ಪಾದನೆ ಬೆದರಿಕೆಯುಳ್ಳ 7 ಮುಸ್ಲಿಂ ರಾಷ್ಟ್ರಗಳಾದ ಇರಾಕ್, ಇರಾನ್, ಸುಡಾನ್, ಲಿಬಿಯಾ, ಯೆಮೆನ್ ಮತ್ತು ಸೊಮಾಲಿಯಾ ದೇಶಗಳ ನಾಗರೀಕರು ಅಮೆರಿಕ ರಾಷ್ಟ್ರವನ್ನು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿತ್ತು. ಈ ನಿರ್ಧಾರಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು.

ಟ್ರಂಪ್ ಅವರ ಆದೇಶಕ್ಕೆ ಸಿಯಾಟಲ್ ನ ಕೆಳ ನ್ಯಾಯಾಲಯ ನೀಡಿದ್ದ ತಡೆ ಪ್ರಶ್ನಿಸಿ ಸ್ಯಾನ್ ಫ್ರಾನ್ಸಿಸ್ಕೋದ ಮೇಲ್ಮನವಿ ನ್ಯಾಯಾಲಯಕ್ಕೆ ಅಮೆರಿದ ನ್ಯಾಯಾಂಗ ಇಲಾಖೆ ಮನವಿ ಸಲ್ಲಿಸಿತ್ತು. ಟ್ರಂಪ್ ಆಡಳಿತ ಸಲ್ಲಿಸಿದ್ದ ಈ ಮನವಿಯನ್ನು ಮೇಲ್ಮನವಿ ನ್ಯಾಯಾಲಯ ತಿರಸ್ಕರಿಸಿತ್ತು. ಇದರಂತೆ ಟ್ರಂಪ್ ಅವರಿಗೆ ಹಿನ್ನಡೆಯುಂಟಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್