ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ: 6.6ರಷ್ಟು ತೀವ್ರತೆ ದಾಖಲು
ಪಾಕಿಸ್ದಾನದ ಬಲೂಚಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.6ರಷ್ಟು ತೀವ್ರತೆ ದಾಖಲಾಗಿದೆ...
ಕರಾಚಿ: ಪಾಕಿಸ್ದಾನದ ಬಲೂಚಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.6ರಷ್ಟು ತೀವ್ರತೆ ದಾಖಲಾಗಿದೆ.
ಬೆಳಿಗಿನ ಜಾವ 3.3ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಬಲೂಚಿಸ್ತಾನದ ಪಾಸ್ನಿ, ತುರ್ಬಾತ್, ಗ್ವದಾರ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿರುವುದಾಗಿ ವರದಿಗಳು ತಿಳಿಸಿವೆ.
ಭೂಕಂಪದ ಕೇಂದ್ರ ಬಿಂದು ನೈಋತ್ಯ ಪಾಕಿಸ್ತಾನದಿಂದ 23 ಕಿ.ಮೀ ದೂರದಲ್ಲಿರುವ ಪಾಸ್ನಿ ಎಂಬ ನಗರದಲ್ಲಿ ಕಂಡು ಬಂದಿದೆ ಎಂದು ಯುಎಸ್ ಭೂ ಸರ್ವೇಕ್ಷಣ ವಿಭಾಗ ಹೇಳಿದೆ.
ಭೂಕಂಪದಿಂದ ಯಾವುದೇ ಸಾವು ನೋವುಗಳು ಸಂಭವಿಸಿರುವ ಕುರಿತಂತೆ ವರದಿಗಳಾಗಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.