ಪಾಕ್ ನಲ್ಲಿರುವ ಭಯೋತ್ಪಾದಕ ಗುಂಪುಗಳ ನಿರ್ಮೂಲನೆಗೆ ಬದ್ಧ: ಬಜ್ವಾ
ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಸಂಘಟನೆಗಳನ್ನು ನಿರ್ಮೂಲನೆ ಮಾಡಲು ಬದ್ಧವಿರುವುದಾಗಿ ಬಜ್ವಾ ಭರವಸೆ ನೀಡಿದ್ದಾರೆ.
ವಾಷಿಂಗ್ ಟನ್: ಪಾಕಿಸ್ತಾನದ ಸೇನಾ ಮುಖ್ಯಸ್ಥ, ಅಮೆರಿಕ ರಕ್ಷಣಾ ಕಾರ್ಯದರ್ಶಿ(ಸಚಿವ) ಜೇಮ್ಸ್ ಮಟ್ಟಿಸ್ ದೂರವಾಣಿ ಸಂಭಾಷಣೆ ನಡೆಸಿದ್ದು, ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಸಂಘಟನೆಗಳನ್ನು ನಿರ್ಮೂಲನೆ ಮಾಡಲು ಬದ್ಧವಿರುವುದಾಗಿ ಬಜ್ವಾ ಭರವಸೆ ನೀಡಿದ್ದಾರೆ.
ಉಭಯ ನಾಯಕರು ಸೇನಾ ದ್ವಿಪಕ್ಷೀಯ ಬಾಂಧವ್ಯದ ಕುರಿತು ಮಾತನಾಡಿದ್ದಾರೆ, ಮಾತುಕತೆ ವೇಳೆ ಜನರಲ್ ಬಜ್ವಾ ಭಯೋತ್ಪಾದಕ ಸಂಘಟನೆಗಳ ನಿರ್ಮೂಲನೆಗೆ ಪಾಕಿಸ್ತಾನದ ಬದ್ಧತೆಯನ್ನು ಪುನರುಚ್ಛರಿಸಿದ್ದಾರೆ ಎಂದು ಪೆಂಟಗನ್ ಹೇಳಿಕೆ ಬಿಡುಗಡೆ ಮಾಡಿದೆ.
ಖೋರಾಸನ್ ಪ್ರಾಂಟ್ಯದಲ್ಲಿ ಐಎಸ್ಐಎಸ್ ಉಗ್ರ ಸಂಘಟನೆಯನ್ನು ನಿರ್ಮೂಲನೆ ಮಾಡಲು ಹಾಗೂ ಪಾಕಿಸ್ತಾನ ಸೇನೆ ಎಫ್ಎಟಿಎ ಪ್ರದೇಶಗಳಲ್ಲಿ ನಡೆಸಿರುವ ತ್ಯಾಗಕ್ಕೆ ಮಟ್ಟಿಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಪೆಂಟಗನ್ ನ ವಕ್ತಾರರು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.