ಸಾಂದರ್ಭಿಕ ಚಿತ್ರ 
ವಿದೇಶ

ಅಂಗೋಲಾ ಫುಟ್ಬಾಲ್ ಸ್ಟೇಡಿಂನಲ್ಲಿ ಕಾಲ್ತುಳಿತ, 17 ಸಾವು

ಉತ್ತರ ಅಂಗೋಲಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 17 ಮಂದಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಲೌಂಡಾ: ಉತ್ತರ ಅಂಗೋಲಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 17 ಮಂದಿ ಮೃತಪಟ್ಟಿರುವ ದಾರುಣ ಘಟನೆ ಶನಿವಾರ ನಡೆದಿದೆ.
ಆಫ್ರಿಕಾ ಖಂಡದ ದಕ್ಷಿಣ ಭಾಗದ ಅಂಗೋಲಾದ ಉಜಿ ನಗರದಲ್ಲಿ ನಡೆಯುತ್ತಿದ್ದ ದೇಶಿ ಲೀಗ್ ಪಂದ್ಯದ ವೇಳೆ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ ಮತ್ತು  ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ಸ್ಥಳೀಯ ತಂಡಗಳ ನಡುವೆ ಪಂದ್ಯಾವಳಿ ಆರಂಭಕ್ಕೂ ಮುನ್ನ ಕ್ರೀಡಾ ಅಭಿಮಾನಿಗಳು ಗೇಟ್ ಮುರಿದು ಒಳ ನುಗ್ಗಿದ ಪರಿಣಾಮ ದುರಂತ ಸಂಭವಿಸಿದೆ. ಘಟನೆಯಲ್ಲಿ 76 ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಐವರ ಸ್ಥಿತಿ ಚಿಂತಾಜನಕವಾಗಿದೆ.
ಅಂಗೋಲಾ ಅಧ್ಯಕ್ಷ ಜೋಸ್ ಎಡ್ವಡೋ ಡೋಸ್ ಸಂಟೋಸ್ ಅವರು ದುರಂತದ ತನಿಖೆಗೆ ಆಗ್ರಹಿಸಿರುವುದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು