ವಿದೇಶ

ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕಲ್ ಫ್ಲಿನ್ ರಾಜಿನಾಮೆ

Lingaraj Badiger
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕಲ್ ಫ್ಲಿನ್ ಅವರು ಸೋಮವಾರ ತಡರಾತ್ರಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. 
ರಷ್ಯಾದೊಂದಿಗಿನ ಸಂಬಂಧಕ್ಕೆ ಸಂಬಂಧಿಸಿದಂತೆ ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಇತರೆ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮೈಕಲ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಧಿಕಾರ ವಹಿಸಿಕೊಂಡ ಒಂದು ತಿಗಳೊಳಗೆ ಮೈಕಲ್ ರಾಜಿನಾಮೆ ನೀಡಿದ್ದು ಅಚ್ಚರಿ ಮೂಡಿಸಿದೆ.
ಅಮೆರಿಕದ ರಷ್ಯಾ ರಾಯಭಾರಿಗೆ ತಾವು ಹಲವು ಬಾರಿ ಕರೆ ಮಾಡಿದ್ದರ ಬಗ್ಗೆ ಮತ್ತು ಅವರೊಂದಿಗೆ ನಡೆಸಿದ ಮಾತುಕತೆಯ ಬಗ್ಗೆ ಉಪಾಧ್ಯಕ್ಷರಿಗೆ ಅಪೂರ್ಣ ಮಾಹಿತಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಕಲ್ ಅವರು ರಾಜಿನಾಮೆ ನೀಡಿದ್ದಾರೆ.
ಮೈಕಲ್ ಫ್ಲಿನ್ ಅವರ ರಾಜಿನಾಮೆಯನ್ನು ಅಂಗೀಕರಿಸಿರುವ ಡೊನಾಲ್ಡ್ ಟ್ರಂಪ್, ನಿವೃತ್ತ ಲೆಫ್ಟಿನೆಂಟ್ ಜನರಲ್ ಕೀತ್ ಕೆಲ್ಲಾಗ್ ಅವರನ್ನು ಹಂಗಾಮಿ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಕ ಮಾಡಿದ್ದಾರೆ.
SCROLL FOR NEXT