ಭಯೋತ್ಪಾದನೆಯ ಬೆದರಿಕೆಯನ್ನು ವಿರೋಧಿಸಬೇಕು ಮತ್ತು ಮಟ್ಟಹಾಕಬೇಕು: ಟ್ರಂಪ್
ಭಯೋತ್ಪಾದನೆಯ ಬೆದರಿಕೆಯನ್ನು ವಿರೋಧಿಸಬೇಕು ಮತ್ತು ಮಟ್ಟಹಾಕಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ವಾಷಿಂಗ್ಟನ್: ಭಯೋತ್ಪಾದನೆಯ ಬೆದರಿಕೆಯನ್ನು ವಿರೋಧಿಸಬೇಕು ಮತ್ತು ಮಟ್ಟಹಾಕಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಅಲ್ಲದೆ ತಮ್ಮ ಸರ್ಕಾರ ಈ ಗುರಿಯನ್ನು ಸಾಧಿಸಲಿದೆ ಎಂದು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ವಾರದ ರೆಡಿಯೋ ಮತ್ತು ದೇಶವನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್, ಭಯೋತ್ಪಾದನೆಯನ್ನು ವಿರೋಧಿಸಬೇಕು ಮತ್ತು ಮಟ್ಟಹಾಕಬೇಕಾಗಿದ್ದು, ಅದನ್ನು ನಾವು ಖಂಡಿತ ಮಾಡುತ್ತೇವೆ ಎಂದಿದ್ದಾರೆ.
ಕಳೆದ ವಾರ ನಾನು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಹು ಅವರನ್ನು ಭೇಟಿ ಮಾಡಿದ್ದೆ ಮತ್ತು ಅವರಿಗೆ ಇಸ್ರೆಲ ಭದ್ರತೆಗೆ ಅಮೆರಿಕ ಬದ್ಧವಾಗಿದೆ. ನನ್ನ ಸ್ನೇಹಿತ ಪ್ರಧಾನಿ ಬೆಂಜಮಿನ್ ಅವರನ್ನು ವೈಟ್ ಹೌಸ್ ಗೆ ಸ್ವಾಗತಿಸಿದ್ದಕ್ಕೆ ಹೆಮ್ಮೆ ಇದೆ ಎಂದು ಟ್ರಂಪ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.