ಬೀರುತ್: ಸಿರಿಯಾದ ಅಲ್-ಬಾಬ್ ನಗರದಲ್ಲಿ ಶುಕ್ರವಾರ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ 29 ಮಂದಿ ಮೃತಪಟ್ಟಿದ್ದಾರೆ ಎಂದು ಮಾನಿಟರ್ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಸುಸಿಯಾನ್ ಪ್ರದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಸಂಘಟನೆಯ ಉಗ್ರರು ಸ್ಫೋಟಕಗಳನ್ನು ಹೊಂದಿದ್ದ ವಾಹನವೊಂದನ್ನು ಸ್ಫೋಟಿಸಿಕೊಂಡಿದ್ದು, ದಾಳಿಯಲ್ಲಿ 29 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಮೃತರೆಲ್ಲರೂ ಟರ್ಕಿಷ್ ಬೆಂಬಲಿತ ಬಂಡುಕೋರರು ಸಿರಿಯನ್ ಮಾನವ ಹಕ್ಕುಗಳ ವೀಕ್ಷಣಾಲಯ ಹೇಳಿದೆ.