ಅಮೆರಿಕಾ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

ಇಸ್ಲಾಮಿಕ್ ಭಯೋತ್ಪಾದನೆಯಿಂದ ದೇಶವನ್ನು ರಕ್ಷಿಸಲು ಕಠಿಣ ಕ್ರಮ: ಅಮೆರಿಕಾ

ಇಸ್ಲಾಮಿಕ್ ಭಯೋತ್ಪಾದನೆಯ ಮೂಲ ಸ್ವರೂಪದಿಂದ ದೇಶವನ್ನು ರಕ್ಷಿಸಲು ಕಠಿಣ ಕ್ರಮಗಳನ್ನು...

ವಾಷಿಂಗ್ಟನ್ ಡಿಸಿ: ಇಸ್ಲಾಮಿಕ್ ಭಯೋತ್ಪಾದನೆಯ ಮೂಲ ಸ್ವರೂಪದಿಂದ ದೇಶವನ್ನು ರಕ್ಷಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಇಸಿಸ್ ಸಂಘಟನೆ ಎಲ್ಲಾ ಧರ್ಮಗಳ ಜನರನ್ನು ಕೊಂದುಹಾಕುತ್ತಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕಾ ಕಾಂಗ್ರೆಸ್ ಜಂಟಿ ಅಧಿವೇಶನವನ್ನುದ್ದೇಶಿ ಹೇಳಿದ್ದಾರೆ.
ಅವರು ತಮ್ಮ ಭಾಷಣದಲ್ಲಿ, ಅಮೆರಿಕಾವನ್ನು ಇಸ್ಲಾಮಿಕ್ ಭಯೋತ್ಪಾದನೆಯ ಮೂಲಭೂತವಾದದಿಂದ ರಕ್ಷಿಸಲು ಅನೇಕ ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇಸಿಸ್ ಸಂಘಟನೆ ಮುಸಲ್ಮಾನರು, ಕ್ರಿಸ್ತಿಯನ್ನರು ಹೀಗೆ ಎಲ್ಲಾ ಧರ್ಮಗಳ ಜನರನ್ನು ನಾಶ ಮಾಡುತ್ತಿದೆ ಎಂದು ಟೀಕಿಸಿದರು.
ಇಸಿಸ್ ಭಯೋತ್ಪಾದಕ ಸಂಘಟನೆಯನ್ನು ದಮನ ಮಾಡಲು ಯೋಜನೆ ರೂಪಿಸುವಂತೆ ರಕ್ಷಣಾ ಇಲಾಖೆಗೆ ಆದೇಶ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ನಮ್ಮ ಮೈತ್ರಿ ದೇಶಗಳೊಂದಿಗೆ ಸೇರಿ ಭಯೋತ್ಪಾದಕ ಗುಂಪುಗಳನ್ನು ನಾಶಪಡಿಸಲು ನಾವು ಪ್ರತಿಜ್ಞೆ ಮಾಡುತ್ತೇವೆ. ಅಮೆರಿಕಾ ಸಂಯುಕ್ತ ಸಂಸ್ಥಾನವನ್ನು ಉಗ್ರಗಾಮಿಗಳ ಆಶ್ರಯ ತಾಣವಾಗಲು ಬಿಡುವುದಿಲ್ಲ ಎಂದು ಹೇಳಿದರು.
ತೀವ್ರಗಾಮಿ ಇಸ್ಲಾಮಿಕ್ ಭಯೋತ್ಪಾದನೆಯ ಪದ ಬಳಸುವುದು ಅಮೆರಿಕಾಕ್ಕೆ ಪ್ರಯೋಜನವಾಗುವುದಿಲ್ಲ, ಯಾಕೆಂದರೆ ಇಸ್ಲಾಂ ಧರ್ಮದ ವಿಕೃತ ಭಾವವನ್ನು ಭಯೋತ್ಪಾದಕ ಸಂಘಟನೆಗಳಾದ ಇಸಿಸ್ ನಂತವು ಪ್ರತಿನಿಧಿಸುತ್ತವೆ ಎಂದು ಡೊನಾಲ್ಡ್ ಟ್ರಂಪ್ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಹೆಚ್.ಆರ್.ಮೆಕ್ ಮಾಸ್ಟರ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಮಾತುಗಳನ್ನಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!