ಸಾಂದರ್ಭಿಕ ಚಿತ್ರ 
ವಿದೇಶ

ಬಾಗ್ದಾದ್‌ನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ, 32 ಮಂದಿ ಸಾವು

ಬಗ್ದಾದ್‌ ನ ನೆರೆಯ ನಗರ ಸದ್ರಾದಲ್ಲಿ ಸೋಮವಾರ ಆತ್ಮಾಹುತಿ ಕಾರ್‌ ಬಾಂಬ್‌ ದಾಳಿ ನಡೆದಿದ್ದು, ದಾಳಿಯಲ್ಲಿ ಕನಿಷ್ಠ 32 ಮಂದಿ...

ಬಾಗ್ದಾದ್‌: ಬಾಗ್ದಾದ್‌ ನ ನೆರೆಯ ನಗರ ಸದ್ರಾದಲ್ಲಿ ಸೋಮವಾರ ಆತ್ಮಾಹುತಿ ಕಾರ್‌ ಬಾಂಬ್‌ ದಾಳಿ ನಡೆದಿದ್ದು, ದಾಳಿಯಲ್ಲಿ ಕನಿಷ್ಠ 32 ಮಂದಿ ಮೃತಪಟ್ಟಿದ್ದಾರೆ ಮತ್ತು 61ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ಮೃತಪಟ್ಟವರ ಪೈಕಿ ಹೆಚ್ಚಿನವರು ದಿನಗೂಲಿ ಕಾರ್ಮಿಕರಾಗಿದ್ದು, ಸದ್ರಾ ನಗರದ ಹೊರವಲಯದಲ್ಲಿ ದಿನದ ಕೂಲಿಗಾಗಿ ಕಾಯುತ್ತಿದ್ದರು ಎನ್ನಲಾಗಿದೆ. 
ಬಾಗ್ದಾದ್ ಈಶಾನ್ಯದಲ್ಲಿರುವ ಈ ನಗರವು ಶಿಯಾ ಬಾಹುಳ್ಯ ಹೊಂದಿದ್ದು ನಿರಂತರ ದಾಳಿಗೆ ಗುರಿಯಾಗಿದೆ. 
ಪೊಲೀಸ್‌ ಕರ್ನಲ್‌ ಒಬ್ಬರ ಪ್ರಕಾರ ಈ ಆತ್ಮಾಹುತಿ ದಾಳಿಯಲ್ಲಿ 32 ಜನರು ಬಲಿಯಾಗಿದ್ದಾರೆ; 61 ಮಂದಿ ಗಾಯಗೊಂಡಿದ್ದಾರೆ. ಕಳೆದ ಶನಿವಾರವಷ್ಟೇ ಇಲ್ಲಿನ ಜನದಟ್ಟನೆಯ ಮಾರ್ಕೆಟ್‌ನಲ್ಲಿ ಸಂಭವಿಸಿದ್ದ ಅವಳಿ ಸ್ಫೋಟದಲ್ಲಿ 27 ಮಂದಿ ಅಸುನೀಗಿದ್ದರು.
ಇಸ್ಲಾಮಿಕ್‌ ಸ್ಟೇಟ್‌ ಗ್ರೂಪ್‌(ಐಎಸ್‌) ದಾಳಿಯ ಹೊಣೆ ಹೊತ್ತಿದ್ದು, ದಾಳಿಯು ‘ಹುತಾತ್ಮರ ಕಾರ್ಯಾಚರಣೆ’ ಎಂದು ಘೋಷಿಸಿಕೊಂಡಿದ್ದು, ಘಟನೆಯಲ್ಲಿ ಒಟ್ಟು 40 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!