ಮನಸ್ವಿ ಮಂಮ್ಗೈ 
ವಿದೇಶ

ಜ.20ರಂದು ಡೊನಾಲ್ಡ್ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ: ಕಾರ್ಯಕ್ರಮದಲ್ಲಿ ಮನರಂಜಿಸಲಿರುವ ಬಾಲಿವುಡ್ ಸೆಲೆಬ್ರಿಟಿಗಳು

ಇದೇ 20ರಂದು ಅಮೆರಿಕದ 45ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡೊನಾಲ್ಡ್ ಟ್ರಂಪ್ ಅವರ...

ನವದೆಹಲಿ: ಇದೇ 20ರಂದು ಅಮೆರಿಕದ 45ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡೊನಾಲ್ಡ್ ಟ್ರಂಪ್ ಅವರ ಪದವಿ ಸ್ವೀಕಾರ ಸಮಾರಂಭದಲ್ಲಿ ಅನೇಕ ಬಾಲಿವುಡ್ ನಟ-ನಟಿಯರು ಕಾರ್ಯಕ್ರಮ ನೀಡಲಿದ್ದಾರೆ ಎಂದು ರಿಪಬ್ಲಿಕನ್ ಹಿಂದೂ ಸಮ್ಮಿಶ್ರ ಭಾರತದ ರಾಯಭಾರಿ ಮತ್ತು ಡೊನಾಲ್ಡ್ ಟ್ರಂಪ್ ಅವರ ಬೆಂಬಲಗಾರ್ತಿ ಮನಸ್ವಿ ಮಂಮ್ಗೈ ತಿಳಿಸಿದ್ದಾರೆ.
ಜನವರಿ 20ರಂದು ವಾಷಿಂಗ್ಟನ್ ನಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ನೀವು ಬಾಲಿವುಡ್ ನ ಖ್ಯಾತ ನಟ, ನಟಿಯರು, ಅವರ ಮನರಂಜನೆಯನ್ನು ಸವಿಯಬಹುದು ಎಂದು ನಟಿ ಹಾಗೂ ಮಾಜಿ ಮಿಸ್ ಇಂಡಿಯಾ ಮನಸ್ವಿ ಮಂಮ್ಗೈ ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಇದುವರೆಗೆ ಅಧ್ಯಕ್ಷರಾದವರಲ್ಲಿ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಉತ್ತಮ ಅಧ್ಯಕ್ಷರೆನಿಸಿಕೊಳ್ಳಲಿದ್ದಾರೆ. ಏಕೆಂದರೆ ಅವರು ಈಗಾಗಲೇ ಬಹಿರಂಗ ಬೆಂಬಲವನ್ನು ಭಾರತಕ್ಕೆ ನೀಡಿದ್ದಾರೆ ಎಂದರು.
ಅಮೆರಿಕ ರಾಜಧಾನಿಯಲ್ಲಿ ಜನವರಿ 20ರಂದು ಸಾಯಂಕಾಲ ನಡೆಯುವ ವೈಭವೋಪೇತ ಕಾರ್ಯಕ್ರಮದಲ್ಲಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel