ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಅಮೆರಿಕಾದ ಶ್ವೇತಭವನದಲ್ಲಿ ಪ್ರಮುಖ ಹುದ್ದೆಗೆ ಭಾರತೀಯ ಮೂಲದ ರಾಜೀವ್ ಶಾ ನೇಮಕ

ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಭಾರತೀಯ ಮೂಲದ ಅಮೆರಿಕನ್...

ಡಾ. ರಾಜೀವ್ ಶಾ
Sumana Upadhyaya
Updated On : 5 Jan 2017, 9:29 am
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಭಾರತೀಯ ಮೂಲದ ಅಮೆರಿಕನ್ ಡಾ. ರಾಜೀವ್ ಜೆ.ಶಾ ಅವರಿಗೆ ಶ್ವೇತ ಭವನದಲ್ಲಿ ಪ್ರಮುಖ ಹುದ್ದೆ ನೀಡಿದ್ದಾರೆ.
ಶಾ ಅವರ ಪೋಷಕರು ಗುಜರಾತ್ ನಿಂದ ಅಮೆರಿಕಕ್ಕೆ ವಲಸೆ ಹೋಗಿದ್ದರು. ಇದೀಗ ಶಾ ಅಧ್ಯಕ್ಷರ ಉಪ ಸಹಾಯಕರಾಗಿ ಮತ್ತು ಉಪ ಸಂವಹನ ನಿರ್ದೇಶಕ ಮತ್ತು ಸಂಶೋಧನಾ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ ಎಂದು ಅಧ್ಯಕ್ಷೀಯ ಪರಿವರ್ತನಾ ತಂಡ ಘೋಷಿಸಿದೆ.
ಪ್ರಸ್ತುತ ರಾಜ್ ಶಾ ರಿಪಬ್ಲಿಕನ್ ರಾಷ್ಟ್ರೀಯ ಸಮಿತಿಯ ವಿರೋಧ ಸಂಶೋಧನಾ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಇದರಲ್ಲಿ ಅವರು ಮೊನ್ನೆ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಿಲರಿ ಕ್ಲಿಂಟನ್ ವಿರುದ್ಧ ಪ್ರಚಾರದ ನೇತೃತ್ವವನ್ನು ವಹಿಸಿದ್ದರು. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments