ಸ್ಫೋಟದಲ್ಲಿ ನಾಶವಾಗಿರುವ ವಾಹನಗಳನ್ನು ಸ್ಥಳಾಂತರಗೊಳಿಸುತ್ತಿರುವ ಭದ್ರತಾ ಸಿಬ್ಬಂದಿಗಳು 
ವಿದೇಶ

ಆಫ್ಘಾನಿಸ್ತಾನ ಸಂಸತ್ ಬಳಿ ಅವಳಿ ಬಾಂಬ್ ಸ್ಫೋಟ: 50 ಸಾವು, ಹಲವರಿಗೆ ಗಾಯ

ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನ ಸಂಸತ್ ಭವನದ ಕಚೇರಿಯನ್ನು ಗುರಿಯಾಗಿಟ್ಟುಕೊಂಡು ಅವಳಿ ಬಾಂಬ್ ಸ್ಫೋಟಿಸಲಾಗಿದ್ದು, ಘಟನೆಯಲ್ಲಿ 50 ಮಂದಿ ಸಾವನ್ನಪ್ಪಿ ಹಲವರಿಗೆ ಗಾಯವಾಗಿರವ ಘಟನೆ ನಡೆದಿದೆ...

ಕಾಬೂಲ್: ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನ ಸಂಸತ್ ಭವನದ ಕಚೇರಿಯನ್ನು ಗುರಿಯಾಗಿಟ್ಟುಕೊಂಡು ಅವಳಿ ಬಾಂಬ್ ಸ್ಫೋಟಿಸಲಾಗಿದ್ದು, ಘಟನೆಯಲ್ಲಿ 50 ಮಂದಿ ಸಾವನ್ನಪ್ಪಿ ಹಲವರಿಗೆ ಗಾಯವಾಗಿರವ ಘಟನೆ ನಡೆದಿದೆ.

ಆಫ್ಘಾನಿಸ್ತಾನದ ಯುಎಇ ರಾಯಭಾರಿ ದಕ್ಷಿಣ ಕಂದಹಾರ್ ನಲ್ಲಿರುವ ಆಫ್ಘಾನಿಸ್ತಾನ ರಾಜ್ಯಪಾಲರ ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿಯೇ ಕಾಂಪೌಂಡ್ ಒಳಗಿದ್ದ ಸೋಫಾದಲ್ಲಿ ಬಾಂಬ್ ವೊಂದನ್ನು ಇಟ್ಟು ಸ್ಫೋಟ ನಡೆಸಲಾಗಿದೆ. ಘಟನೆಯಲ್ಲಿ ಯುಎಇ ರಾಯಭಾರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪರಾರಿಯಾಗಿದ್ದಾರೆ.

ಇದಾದ ಕೆಲವೇ ಗಂಟೆಗಳಲ್ಲಿ ಸಂಸತ್ತಿನ ಬಳಿ ಕೂಡ ಬಾಂಬ್ ಸ್ಫೋಟ ನಡೆಸಲಾಗಿದೆ. ಈ ವೇಳೆ 30 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿ, 80ಕ್ಕೂ ಹೆಚ್ಚಿ ಮಂದಿ ಗಾಯಗೊಂಡಿದ್ದಾರೆ.

ಇದಲ್ಲದೆ, ಜನನಿಬಿಡ ಪ್ರದೇಶಗಳಲ್ಲಿಯೂ ತಾಲಿಬಾನ್ ಉಗ್ರರು ಆತ್ಮಹತ್ಯಾ ದಾಳಿ ನಡೆಸಿದ್ದು, ಈ ವೇಳೆ ಸಾವನ್ನಪ್ಪಿರುವವವರ ಸಂಖ್ಯೆ ನಿಖರವಾಗಿ ತಿಳಿದುಬಂದಿಲ್ಲ. ಭಾರತ ಹಣಕಾಸು ನೆರವು ನೀಡಿರುವ ಸಂಸತ್ ಬಳಿಯೇ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸರಣಿ ಸ್ಫೋಟದಲ್ಲಿ ಭಾರೀ ಸಾವುನೋವು ಸಂಭವಿಸಿರುವ ಸಾಧ್ಯತೆಗಳಿದ್ದು, ಸಂಸತ್ ಭವನದ ಕಚೇರಿಗಳು ಮತ್ತು ಸಿಬ್ಬಂದಿಗಳು ಈ ಸ್ಫೋಟಗಳ ಗುರಿಯಾಗಿದ್ದರು ಎಂದು ವರದಿಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT