ಉಗ್ರ ಮಸೂದ್ ಅಜರ್ 
ವಿದೇಶ

ಮಸೂದ್ ಅಜರ್ ನ್ನು ಜಾಗತಿಕ ಭಯೋತ್ಪಾದಕರ ಪಟ್ಟಿಗೆ ಸೇರಿಸಲು ಫ್ರಾನ್ಸ್ ಬೆಂಬಲ

ಉಗ್ರ ಮಸೂದ್ ಅಜರ್ ನ್ನು ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ಭಾರತದ ಪ್ರಸ್ತಾವನೆಯನ್ನು ಫ್ರಾನ್ಸ್ ಬೆಂಬಲಿಸಿದೆ.

ನವದೆಹಲಿ: ಉಗ್ರ ಮಸೂದ್ ಅಜರ್ ನ್ನು ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ಭಾರತದ ಪ್ರಸ್ತಾವನೆಯನ್ನು ಫ್ರಾನ್ಸ್ ಬೆಂಬಲಿಸಿದೆ. 
ಮಸೂದ್ ಅಜರ್ ಗೆ ನಿರ್ಬಂಧ ವಿಧಿಸುವುದಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಾತನಾಡಿರುವ ಫ್ರಾನ್ಸ್ ನ ವಿದೇಶಾಂಗ ಸಚಿವ ಜಿಯನ್ ಮಾರ್ಕ್ ಅಯ್ರೌಲ್ಟ್, ಚೀನಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಭಯೋತ್ಪಾದನೆ ವಿರುದ್ಧ ಹೋರಾಡಲು ಅಂತಾರಾಷ್ಟ್ರೀಯ ಸಮುದಾಯದ ಬೆಂಬಲ ಎಲ್ಲಾ ಕಡೆಗಳಲ್ಲೂ ಒಂದೇ ರೀತಿಯಲ್ಲಿರಬೇಕು ಎಂದು ಚೀನಾ ಹೆಸರು ಪ್ರಸ್ತಾಪಿಸದೇ ಹೇಳಿದ್ದಾರೆ. 
ಭಯೋತ್ಪಾದಕ ದಾಳಿ ಎದುರಾದ ಸಂದರ್ಭದಲ್ಲಿ ರಕ್ಷಣೆಗಾಗಿ ಭಾರತ 2016 ರ ಸೆಪ್ಟೆಂಬರ್ ನಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ ದಾಳಿ ನಡೆಸುವ ಅಗತ್ಯವಿರುತ್ತದೆ ಎಂದು ಜಿಯನ್ ಮಾರ್ಕ್ ಭಾರತವನ್ನು ಬೆಂಬಲಿಸಿದ್ದಾರೆ. ಭಾರತದ ಮೇಲೆ ನಡೆಯುತ್ತಿರುವ ಭಯೋತ್ಪಾದಕ ದಾಳಿಯನ್ನು ಫ್ರಾನ್ಸ್ ಖಂಡಿಸುತ್ತದೆ ಹಾಗೂ ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಫ್ರಾನ್ಸ್ ನ ವಿದೇಶಾಂಗ ಸಚಿವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?