ಇಸ್ಲಾಮಿಕ್ ಸ್ಟೇಟ್ 
ವಿದೇಶ

ಆಫ್ಗಾನಿಸ್ತಾನದಲ್ಲಿ 14 ಪಾದ್ರಿಗಳನ್ನು ಅಪಹರಿಸಿದ ಇಸ್ಲಾಮಿಕ್ ಸ್ಟೇಟ್ ಉಗ್ರರು

ಧಾರ್ಮಿಕ ಶಾಲೆಗಳಲ್ಲಿ ಬೋಧನೆ ಮಾಡುತ್ತಿದ್ದ 14 ಪಾದ್ರಿಗಳನ್ನು ಇಸ್ಲಾಮಿಕ್ ಸ್ಟೇಟ್ ಉಗ್ರರು ಅಪಹರಿಸಿದ್ದಾರೆ ಎಂದು ಆಫ್ಗಾನಿಸ್ತಾನ ಅಧಿಕಾರಿಗಳು ತಿಳಿಸಿದ್ದಾರೆ...

ಕಾಬೂಲ್: ಧಾರ್ಮಿಕ ಶಾಲೆಗಳಲ್ಲಿ ಬೋಧನೆ ಮಾಡುತ್ತಿದ್ದ 14 ಪಾದ್ರಿಗಳನ್ನು ಇಸ್ಲಾಮಿಕ್ ಸ್ಟೇಟ್ ಉಗ್ರರು ಅಪಹರಿಸಿದ್ದಾರೆ ಎಂದು ಆಫ್ಗಾನಿಸ್ತಾನ ಅಧಿಕಾರಿಗಳು ತಿಳಿಸಿದ್ದಾರೆ. 
ಅಫ್ಗಾನಿಸ್ತಾನದ ಪೂರ್ವ ನನ್ಗಾಹಾರ್ ಪ್ರಾಂತ್ಯದಲ್ಲಿ ಶಾಲೆ ಮತ್ತು ಆಡಳಿತ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 14 ಪಾದ್ರಿಗಳನ್ನು ಉಗ್ರರು ಅಪಹರಿಸಿದ್ದಾರೆ ಎಂದು ಶಿಕ್ಷಣ ಇಲಾಖೆ ವಕ್ತಾರ ಮೊಹಮ್ಮದ್ ಅಸಿಫ್ ಹೇಳಿದ್ದಾರೆ. 
ಕಳೆದ ವಾರಾಂತ್ಯದಲ್ಲಿ ಶಸ್ತ್ರಸರ್ಜಿತ ಮೂವರು ವ್ಯಕ್ತಿಗಳು ಈ ಕೃತ್ಯವನ್ನು ಎಸಗಿದ್ದಾರೆ. ಆದರೆ ಯಾವುದೇ ಸಂಘಟನೆ ಇದರ ಹೊಣೆಯನ್ನು ಹೊತ್ತುಕೊಂಡಿಲ್ಲ. ಆದರೆ ಪೊಲೀಸರು ಮತ್ತು ಸರ್ಕಾರಿ ಅಧಿಕಾರಿಗಳು ಇಸ್ಲಾಮಿಕ್ ಸ್ಟೇಟ್ ಉಗ್ರರನ್ನು ದೂಷಿಸಿದ್ದಾರೆ. 
ಏತನ್ಮಧ್ಯೆ, ಅಫ್ಗಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದ ಪೊಲೀಸರು, ಸರ್ಕಾರದ ಹಿರಿಯ ಅಧಿಕಾರಿ ಮುಸ್ತಾಫಾ ಸಫಾಯ್ ಎಂಬುವರನ್ನು ಬೈಕ್ ನಲ್ಲಿ ಬಂದ ಶಸ್ತ್ರಸರ್ಜಿತ ಉಗ್ರರು ಹತ್ಯೆ ಮಾಡಿ ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT