ಮಾಲಿ: ಆಫ್ರಿಕಾದಲ್ಲಿ ಶಾಂತಿ ಕದಡುವ ಸಲುವಾಗಿ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 77 ಮಂದಿ ಸಾವನ್ನಪ್ಪಿದ್ದಾರೆ.
ಮಾಲಿಯ ಗಾವೋದಲ್ಲಿ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು 77 ಮಂದಿ ಸಾವನ್ನಪ್ಪಿದ್ದು 115ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಲಿ ಅಧ್ಯಕ್ಷ ಇಬ್ರಾಹಿಂ ಬೌಬಾಕಾರ್ ಕೀಟಾ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯಲ್ಲಿ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಪರಿಣಾಮ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗನ್ನು ಬಾಮಾಕೋಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ಹಿನ್ನೆಲೆ ಮಾಲಿ ಅಧ್ಯಕ್ಷರು ಮೂರು ದಿನಗಳ ಕಾಲ ರಾಷ್ಟ್ರವ್ಯಾಪ್ತಿ ಶೋಕಾಚರಣೆಯನ್ನು ಘೋಷಿಸಿದ್ದಾರೆ.