ದಾಳಿಗೆ ಒಳಗಾದ ಮೊಗದಿಶು ಹೋಟೆಲ್ 
ವಿದೇಶ

ಮೊಗದಿಶು ಹೋಟೆಲ್ ಮೇಲೆ ಕಾರ್ ಬಾಂಬ್ ದಾಳಿ, ಕನಿಷ್ಠ 7 ಸಾವು

ಮೊಗದಿಶು ಹೋಟೆಲ್ ಹೊರಗಡೆ ಅವಳಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ...

ಮೊಗದಿಶು: ಮೊಗದಿಶು ಹೋಟೆಲ್ ಹೊರಗಡೆ ಅವಳಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಲ್ ಖೈದಾ ಉಗ್ರ ಸಂಘಟನೆಗೆ ಸೇರಿದ ಶಬಾಬ್ ದಂಗೆಕೋರರ ತಂಡ ಈ ದಾಳಿಯ ಹೊಣೆ ಹೊತ್ತುಕೊಂಡಿದ್ದು, ಸೋಮಾಲಿ ಸಂಸತ್ ಸಮೀಪವಿರುವ ದಯಹ್ ಹೋಟೆಲ್ ನ ಗೇಟ್ ಬಳಿ ಕಾರ್ ಬಾಂಬ್ ಸ್ಫೋಟಿಸಿದ್ದಾರೆ. ಬಳಿಕ ಬಂದುಕೂಧಾರಿಯೊಬ್ಬ ಹೋಟೆಲ್ ಒಳಗೆ ನುಗ್ಗಿ ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿ ಇಬ್ರಾಹಿಂ ಮೊಹಮ್ಮದ್ ಹೇಳಿದ್ದಾರೆ.
ಘಟನೆಯ ನಂತರ ಪತ್ರಕರ್ತರು ಹಾಗೂ ಆಂಬುಲೆನ್ಸ್ ಸ್ಥಳಕ್ಕೆ ಆಗಮಿಸಿದ ಬಳಿಕ ಮತ್ತೊಂದು ಬಾಂಬ್ ಸ್ಫೋಟಗೊಂಡಿದೆ. ಈ ವೇಳೆ ಎಎಫ್ ಪಿಯ ಓರ್ವ ಫೋಟೋಗ್ರಾಫರ್ ಸೇರಿದಂತೆ ನಾಲ್ವರು ಪತ್ರಕರ್ತರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದುವರೆಗೆ ನಾಗರಿಕರು ಹಾಗೂ ಭದ್ರತಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದು, ಅವಳಿ ಸ್ಫೋಟದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೊಹಮ್ಮದ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ