ಇಸ್ಲಾಮಿಕ್ ಮೂಲಭೂತವಾದಿಗಳನ್ನು ಅಮೆರಿಕಾದಿಂದ ಹೊರಹಾಕಲು ಟ್ರಂಪ್ ಆದೇಶ 
ವಿದೇಶ

ಇಸ್ಲಾಮಿಕ್ ಮೂಲಭೂತವಾದಿಗಳನ್ನು ಅಮೆರಿಕಾದಿಂದ ಹೊರಹಾಕಲು ಟ್ರಂಪ್ ಆದೇಶ

ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನಿರೀಕ್ಷಿತ ಆದೇಶಗಳನ್ನು ಹೊರಡಿಸುತ್ತಿರುವ ಡೊನಾಲ್ಡ್ ಟ್ರಂಪ್, ಈಗ ನಿರಾಶ್ರಿತರು ಹಾಗೂ 7 ಇಸ್ಲಾಮಿಕ್ ರಾಷ್ಟ್ರಗಳ ಜನರ ಪ್ರವೇಶಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಾಷಿಂಗ್ ಟನ್: ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ನಿರೀಕ್ಷಿತ ಆದೇಶಗಳನ್ನು ಹೊರಡಿಸುತ್ತಿರುವ ಡೊನಾಲ್ಡ್ ಟ್ರಂಪ್, ಈಗ ನಿರಾಶ್ರಿತರು ಹಾಗೂ 7 ಇಸ್ಲಾಮಿಕ್ ರಾಷ್ಟ್ರಗಳ ಜನರ ಪ್ರವೇಶಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. 
ಡೊನಾಲ್ಡ್ ಟ್ರಂಪ್ ಚುನಾವಣೆಯ ಭರವಸೆಗಳ ಪೈಕಿ, ಇಸ್ಲಾಮಿಕ್ ರಾಷ್ಟ್ರಗಳಿಂದ ಬರುವ ನಿರಾಶ್ರಿತರು ಹಾಗೂ ಜನರು ಅಮೆರಿಕ ಪ್ರವೇಶಿಸದಂತೆ ಕಠಿಣ ನಿಯಮಗಳನ್ನು ಜಾರಿಗೊಳಿಸುವುದು ಪ್ರಮುಖವಾಗಿತ್ತು. ಈಗ ಅಧಿಕಾರಕ್ಕೆ ಬಂದ ಒಂದೇ ವಾರದಲ್ಲಿ ಡೊನಾಲ್ಡ್ ಟ್ರಂಪ್ ಇಸ್ಲಾಮಿಕ್ ರಾಷ್ಟ್ರಗಳಿಂದ ಅಮೆರಿಕಾಗೆ ಬರುವ ಜನರನ್ನು ನಿಯಂತ್ರಿಸುವುದಕ್ಕೆ ಕಠಿಣ ನಿಯಮಗಳನ್ನು ವಿಧಿಸಿ ಜ.27 ರಂದು ಆದೇಶ ಹೊರಡಿಸಿದ್ದಾೆರ  
ಅಮೆರಿಕಾವನ್ನು ಉಗ್ರತತ್ವದ ಇಸ್ಲಾಮಿಕ್ ಭಯೋತ್ಪಾದಕರಿಂದ ರಕ್ಷಿಸಲು ಈ ಕ್ರಮ ಕೈಗೊಂಡಿರುವುದಾಗಿ ಆದೇಶ ಹೊರಡಿಸಿದ ನಂತರ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಹೊರಗಿನ ಶತ್ರುಗಳು ಒಳನುಗ್ಗುವುದನ್ನು ತಡೆಗಟ್ಟಿ ದೆಶವನ್ನು ರಕ್ಷಿಸಲು ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿರುವ ಡೊನಾಲ್ಡ್ ಟ್ರಂಪ್, ಉಗ್ರವಾದದ ಇಸ್ಲಾಮಿಕ್ ಭಯೋತ್ಪಾದಕರು ನಮ್ಮ ದೇಶದಲ್ಲಿರುವುದು ಬೇಡ, ದೇಶವನ್ನು ಬೆಂಬಲಿಸುವ, ದೇಶದ ಜನರನ್ನು ಪ್ರೀತಿಸುವವರಷ್ಟೇ ಬೇಕು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?