ಫೆಬ್ರವರಿಯಲ್ಲಿ ಡೊನಾಲ್ಡ್ ಟ್ರಂಪ್- ಜಪಾನ್ ಪ್ರಧಾನಿ ಭೇಟಿ
ಫೆಬ್ರವರಿ 10 ರಂದು ಜಪಾನ್ ಪ್ರಧಾನಿ ಶಿಂಜೋ ಅಬೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ್ನು ಭೇಟಿ ಮಾಡಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.
ವಾಷಿಂಗ್ ಟನ್: ಫೆಬ್ರವರಿ 10 ರಂದು ಜಪಾನ್ ಪ್ರಧಾನಿ ಶಿಂಜೋ ಅಬೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ್ನು ಭೇಟಿ ಮಾಡಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.
ಜ.28 ರಂದು ಡೊನಾಲ್ಡ್ ಟ್ರಂಪ್- ಶಿಂಜೋ ಅಬೆ ದೂರವಾಣಿ ಮೂಲಕ ಮಾತನಾಡಿದ್ದು ಉಭಯ ನಾಯಕರ ಭೇಟಿ ಫೆ.10 ಕ್ಕೆ ನಿಗದಿಯಾಗಿದೆ ಎಂದು ಶ್ವೇತ ಭವನ ಮಾಹಿತಿ ನೀಡಿದೆ. ದ್ವಿಪಕ್ಷೀಯ ಮಾತುಕತೆ ವೇಳೆ ಇಬ್ಬರು ನಾಯಕರು ಅಮೆರಿಕ-ಜಪಾನ್ ಸಹಕಾರದ ಬಗ್ಗೆ ಚರ್ಚೆ ನಡೆಸಿದ್ದಾರೆ.
ಮಾತುಕತೆ ವೇಳೆ ಜಪಾನ್ ಗೆ ಭದ್ರತೆಗೆ ಅಮೆರಿಕ ಬದ್ಧವಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಸುಮಾರು 42 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದು, ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಬಗ್ಗೆ ಹಾಗೂ ಉತ್ತರ ಕೊರಿಯಾದಿಂದ ಸಂಭವಿಸಬಹುದಾಗಿರುವ ಅಪಾಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.