ಸಂಗ್ರಹ ಚಿತ್ರ 
ವಿದೇಶ

ಗಣಿತದ ನೊಬೆಲ್ "ಫೀಲ್ಡ್ಸ್" ಪದಕ ವಿಜೇತೆ ಮರ್ಯಾಮ್ ಮಿರ್ಝಾಖನಿ ನಿಧನ

ಗಣಿತದ ನೊಬೆಲ್ ಪ್ರಶಸ್ತಿ ಎಂದೇ ಖ್ಯಾತಿ ಗಳಿಸಿರುವ ‘ಫೀಲ್ಡ್ಸ್’ ಪದಕ ಪಡೆದ ವಿಶ್ವದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಸ್ಟ್ಯಾನ್‌ಫೋರ್ಡ್ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಮರ್ಯಾಮ್ ಮಿರ್ಝಾಖನಿ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಟೆಹ್ರಾನ್: ಗಣಿತದ ನೊಬೆಲ್ ಪ್ರಶಸ್ತಿ ಎಂದೇ ಖ್ಯಾತಿ ಗಳಿಸಿರುವ ‘ಫೀಲ್ಡ್ಸ್’ ಪದಕ ಪಡೆದ ವಿಶ್ವದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಸ್ಟ್ಯಾನ್‌ಫೋರ್ಡ್ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಮರ್ಯಾಮ್ ಮಿರ್ಝಾಖನಿ  ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಹಲವು ತಿಂಗಳುಗಳಿಂದ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮರ್ಯಾಮ್ ಮಿರ್ಝಾಖನಿ ಅವರು ತಮ್ಮ 40ನೆ ವಯಸ್ಸಿನಲ್ಲಿ ಶನಿವಾರ ನಿಧನರಾಗಿದ್ದಾರೆ ಎಂದು ಸ್ಟ್ಯಾನ್‌ಫೋರ್ಡ್ ಅಧಿಕಾರಿಗಳು ತಿಳಿಸಿದ್ದಾರೆ. ಅಂತಾರಾಷ್ಟ್ರೀಯ  ಗಣಿತ ಒಕ್ಕೂಟ ನಾಲ್ಕು ವರ್ಷಕ್ಕೊಮ್ಮೆ ಫೀಲ್ಡ್ಸ್ ಪದಕವನ್ನು ಪ್ರದಾನ ಮಾಡುತ್ತದೆ. ಈವರೆಗೆ, ಕೇವಲ 54 ಪುರುಷರು ಮತ್ತು ಓರ್ವ ಮಹಿಳೆ ಮಾತ್ರ ಈ ಪ್ರಶಸ್ತಿ ಪಡೆದಿದ್ದಾರೆ. ಈ ಪೈಕಿ ಪದಕ ಪಡೆದ ವಿಶ್ವದ ಏಕೈಕ ಮಹಿಳೆ ಎಂಬ  ಕೀರ್ತಿಗೆ ಮರ್ಯಾಮ್ ಮಿರ್ಝಾಖನಿ ಪಾತ್ರರಾಗಿದ್ದಾರೆ.

ಇರಾನ್ ಸಂಜಾತೆ 40 ವರ್ಷದ ಮರ್ಯಮ್ ಅಮೆರಿಕದ ಸ್ಟಾನ್‌ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ಗಣಿತ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಮಿರ್ಝಾಖನಿಯವರ ನಿಧನಕ್ಕೆ ಇರಾನ್ ಅಧ್ಯಕ್ಷ ಹಸನ್ ರೌಹಾನಿ ತೀವ್ರ  ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ವರ್ತಕರ ಮನವಿಗೆ ಸ್ಪಂದಿಸಿದ ಕೇಂದ್ರ; ದೀಪಾವಳಿ ನಂತರವೇ UPI ಮರ್ಚೆಂಟ್ ಶುಲ್ಕ ಜಾರಿ