ಡೋಕ್ಲಾಮ್ ವಿವಾದ ಬಗೆಹರಿಸಿಕೊಳ್ಳಲು ಭಾರತ-ಚೀನಾ ಮಾತುಕತೆಗೆ ಅಮೆರಿಕಾದ ಸಲಹೆ!
ಭಾರತ-ಚೀನಾ ಗಡಿ ಪ್ರದೇಶಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ವಿವಾದವನ್ನು ಬಗೆಹರಿಸಿಕೊಳ್ಳಲು ಮಾತುಕತೆ ನಡೆಸುವಂತೆ ಅಮೆರಿಕ ಸಲಹೆ ನೀಡಿದೆ.
ವಾಷಿಂಗ್ ಟನ್: ಭಾರತ-ಚೀನಾ ಗಡಿ ಪ್ರದೇಶಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ವಿವಾದವನ್ನು ಬಗೆಹರಿಸಿಕೊಳ್ಳಲು ಮಾತುಕತೆ ನಡೆಸುವಂತೆ ಅಮೆರಿಕ ಸಲಹೆ ನೀಡಿದೆ.
ಸಿಕ್ಕಿಂ ಗಡಿ ಪ್ರದೇಶದಲ್ಲಿ ಚೀನಾ-ಭಾರತದ ನಡುವೆ ವಿವಾದ ಉಂಟಾಗಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅಮೆರಿಕ, ಭಾರತ-ಚೀನಾ ನೇರ ಮಾತುಕತೆಗೆ ಉತ್ತೇಜಿಸುವುದಾಗಿ ಹೇಳಿದೆ.
ಅಮೆರಿಕ ಚೀನಾ-ಭಾರತದ ನಡುವೆ ಉಂಟಾಗಿರುವ ವಿವಾದದ ಬಗ್ಗೆ ಕಾಳಜಿ ಹೊಂದಿದೆ ಎಂದು ಅಮೆರಿಕದ ಸರ್ಕಾರಿ ವಕ್ತಾರರು ಮಾಧ್ಯಮಗಳಿಗೆ ಹೇಳಿದ್ದು, ಎರಡೂ
ರಾಷ್ಟ್ರಗಳು ನೇರ ಮಾತುಕತೆ ನಡೆಸುವುದನ್ನು ಅಮೆರಿಕ ಉತ್ತೇಜಿಸುತ್ತದೆ ಎಂದಿದ್ದಾರೆ.
ಇದೇ ವೇಳೆ ಪತ್ರಕರ್ತರು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಶ್ನೆ ಕೇಳಿದ್ದಕ್ಕೆ, ಭಾರತ-ಚೀನಾವನ್ನು ನೇರವಾಗಿ ಸಂಪರ್ಕಿಸುವಂತೆ ಅಮೆರಿಕ ಸರ್ಕಾರಿ ವಕ್ತಾರರು ಪತ್ರಕರ್ತರಿಗೆ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.