ಅಮೆರಿಕಾಗೆ ಭಾರತ ಪ್ರಮುಖ ರಕ್ಷಣಾ ಪಾಲುದಾರ ರಾಷ್ಟ್ರ: ರಕ್ಷಣಾ ಕಾರ್ಯದರ್ಶಿ ಜೇಮ್ಸ್
ಭಾರತ ಅಮೆರಿಕಾಗೆ ಪ್ರಮುಖ ರಕ್ಷಣಾ ಪಾಲುದಾರ ರಾಷ್ಟ್ರ ಎಂದು ಅಮೆರಿಕ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಹೇಳಿದ್ದಾರೆ.
ವಾಷಿಂಗ್ ಟನ್: ಭಾರತ ಅಮೆರಿಕಾಗೆ ಪ್ರಮುಖ ರಕ್ಷಣಾ ಪಾಲುದಾರ ರಾಷ್ಟ್ರ ಎಂದು ಅಮೆರಿಕ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಹೇಳಿದ್ದಾರೆ.
ಹಿಂದೂ ಮಹಾಸಾಗರದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ನವದೆಹಲಿಯ ಪಾತ್ರವನ್ನು ಅಮೆರಿಕ ಗೌರವಿಸಲಿದೆ ಎಂದು ಜೇಮ್ಸ್ ಮ್ಯಾಟಿಸ್ ತಿಳಿಸಿದ್ದಾರೆ. ಆಗ್ನೇಯ ಏಷ್ಯಾ ಭಾಗದಲ್ಲಿ ಭಯೋತ್ಪಾದನೆ ಹರಡುವಿಕೆಯನ್ನು ತಡೆಗಟ್ಟುವುದಕ್ಕೆ ಅಮೆರಿಕಾ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದೆ.
ಭಾರತವನ್ನು ನಾವು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವೆಂದು ಗುರುತಿಸುತ್ತೇವೆ ಹಾಗೆಯೇ ಭಾರತ ಅಮೆರಿಕಾಗೆ ಪ್ರಮುಖ ರಕ್ಷಣಾ ಪಾಲುದಾರ ರಾಷ್ಟ್ರವೂ ಹೌದಾಗಿದ್ದು, ಹಿಂದೂ ಮಹಾಸಾಗರದಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಭಾರತ ನೆರವಾಗಲಿದೆ ಎಂದು ಜೇಮ್ಸ್ ಮ್ಯಾಟಿಸ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.