ವಿದೇಶ

ದಕ್ಷಿಣ ಬಾಗ್ದಾದ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 20 ಸಾವು

Lingaraj Badiger
ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ ನ ದಕ್ಷಿಣ ಭಾಗದಲ್ಲಿರುವ ಮುಸಾಯಿಬ್ ಪಟ್ಟಣದ ಮಾರುಕಟ್ಟೆಯಲ್ಲಿ ಶುಕ್ರವಾರ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ದಾಳಿಯಲ್ಲಿ 20 ನಾಗರಿಕರು ಮೃತಪಟ್ಟಿದ್ದಾರೆ ಮತ್ತು 34ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮತ್ತು ಭದ್ರತಾ ಮೂಲಗಳು ತಿಳಿಸಿವೆ.
ಆತ್ಮಾಹುತಿ ದಾಳಿಕೋರ ಮುಸಾಯಿಬ್ ಮಾರುಕಟ್ಟೆಯಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದು, ದಾಳಿಯಲ್ಲಿ 20 ನಾಗರಿಕರು ಮೃತಪಟ್ಟಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 11.30ರ ಸುಮಾರಿಗೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸ್ಥಳೀಯ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.
ಈ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.
SCROLL FOR NEXT