ವಾಷಿಂಗ್ ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಶ್ವೇತ ಭವನ ಎದುರು ನೋಡುತ್ತಿದೆ ಎಂದು ಅಮೆರಿಕಾದ ಸರ್ಕಾರಿ ಇಲಾಖೆ ಹೇಳಿದೆ.
ಈ ತಿಂಗಳಾಂತ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಅಮೆರಿಕ ಸರ್ಕಾರಿ ವಕ್ತಾರ ಹೀದರ್ ನೌರ್ಟ್ ಹೇಳಿದ್ದಾರೆ. ಅಮೆರಿಕಾಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಹ್ವಾನ ನೀಡಿದ್ದಾರೆ ಆದರೆ ಮೋದಿ-ಟ್ರಂಪ್ ಭೇಟಿಯ ದಿನಾಂಕದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡಲಿದ್ದಾರೆ.