ಮರಣದಂಡನೆ 
ವಿದೇಶ

ಫೇಸ್‍ಬುಕ್‍ನಲ್ಲಿ ಧರ್ಮನಿಂದನೆ ಪೋಸ್ಟ್: ಪಾಕಿಸ್ತಾನದಲ್ಲಿ ಶಿಯಾ ಮುಸ್ಲಿಂ ವ್ಯಕ್ತಿಗೆ ಮರಣದಂಡನೆ

ಪಾಕಿಸ್ತಾನದಲ್ಲಿ ಧರ್ಮನಿಂದನೆ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಧರ್ಮನಿಂದನೆ ಪೋಸ್ಟ್ ಹಾಕಿದ್ದ ಶಿಯಾ ವ್ಯಕ್ತಿಗೆ...

ಪಾಕಿಸ್ತಾನದಲ್ಲಿ ಧರ್ಮನಿಂದನೆ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಧರ್ಮನಿಂದನೆ ಪೋಸ್ಟ್ ಹಾಕಿದ್ದ ಶಿಯಾ ವ್ಯಕ್ತಿಗೆ ಪಾಕಿಸ್ತಾನ ಭಯೋತ್ಪಾದನಾ ವಿರೋಧಿ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 
ಧರ್ಮನಿಂದನೆ ಪೋಸ್ಟ್ ಗಳನ್ನು ಹಾಕುವ ವ್ಯಕ್ತಿಗಳಿಗೆ ಪಾಕಿಸ್ತಾನ ಇಲ್ಲಿಯವರೆಗೂ ಮರಣದಂಡನೆ ಶಿಕ್ಷೆ ವಿಧಿಸಿಲ್ಲ. ಆದರೆ ಇದೇ ಮೊದಲ ಬಾರಿಗೆ ಶಿಯಾ ಮುಸ್ಲಿಂ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇನ್ನು ಪಾಕಿಸ್ತಾನದಲ್ಲಿ ಶಿಯಾ ಮುಸ್ಲಿಂರು ಅಲ್ಪಸಂಖ್ಯಾತ ಸಮುದಾಯವಾಗಿದೆ. 
ಧರ್ಮನಿಂದನೆ ಆರೋಪದ ಮೇಲೆ 30 ವರ್ಷದ ತೈಮೂರ್ ರಾಜಾ ಎಂಬುವರಿಗೆ ಪಂಜಾಬ್ ಪ್ರಾಂತ್ಯದ ಬಹಾವಾಲ್ಪುರ್ ಜಿಲ್ಲೆಯ ಭಯೋತ್ಪಾದನೆ ವಿರೋಧಿ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶಬೀರ್ ಅಹಮದ್ ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದಾರೆ. 
ಪಾಕಿಸ್ತಾನದಲ್ಲಿ ಪ್ರವಾದಿ ಮೊಹಮ್ಮದ್ ರನ್ನು ನಿಂದಿಸುವುದು ಮಹಾಪರಾಧವೆಂದು ಪರಿಗಣಿಸಲ್ಪಟ್ಟಿದೆ. ತೈಮೂರ್ ರಾಜಾ ಫೇಸ್ ಬುಕ್ ನಲ್ಲಿ ಪ್ರವಾದಿ ಮೊಹಮ್ಮದ್, ಅವರ ಪತ್ನಿ ಹಾಗೂ ಹಿಂಬಾಲಕರ ವಿರುದ್ಧ ಅವಮಾನಕರ ಹೇಳಿಕೆ ನೀಡಿದ್ದರಿಂದ ಮರಣದಂಡನೆ ಶಿಕ್ಷೆಗೆ ಒಳಗಾಗಿದ್ದಾನೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!