ಇಸ್ಲಾಮಾಬಾದ್: ಗಡಿಯಲ್ಲಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ ಭಾರತದ ಡೆಪ್ಯೂಟಿ ಹೈಕಮಿಷನರ್'ಗೆ ಸೋಮವಾರ ಸಮನ್ಸ್ ಜಾರಿ ಮಾಡಿದೆ.
ಜಂದ್ರೋತ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಭಾರತೀಯ ಡೆಪ್ಯೂಟಿ ಹೈಕಮಿಷನರ್ ಜೆ.ಪಿ.ಸಿಂಗ್ ಅವರಿಗೆ ಪಾಕಿಸ್ತಾನ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಗಡಿಯಲ್ಲಿ ಭಾರತೀಯ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಜೂನ್. 10 ಮತ್ತು 12 ರಂದು ನಡೆಸಲಾಗಿರುವ ಅಪ್ರಚೋದಿತ ಗುಂಡಿನ ದಾಳಿಗೆ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ. ಇದನ್ನು ಪಾಕಿಸ್ತಾನ ಖಂಡಿಸುತ್ತದೆ ಪಾಕಿಸ್ತಾನ ಸೇನಾ ಮಹಾನಿರ್ದೇಶಕ ಮೊಹಮ್ಮದ್ ಫೈಸಲ್ ಅವರು ಹೇಳಿದ್ದಾರೆ.
ನಾಗರಿಕರನ್ನು ಗುರಿಯಾಗಿರಿಸಿಕೊಂಡು ನಡೆಸುವ ದಾಳಿ ನಿಜಕ್ಕೂ ಖಂಡನೀಯ, ಇದು ಮಾನವನ ಗೌರವನ್ನು ಹಾಳು ಮಾಡುತ್ತದೆ. ಈ ರೀತಿಯ ವರ್ತನೆ ಮಾನವೀಯತೆ ಹಾಗೂ ಅಂತರಾಷ್ಟ್ರೀಯ ಹಕ್ಕುಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ. ಭಾರತ 2003ರ ಒಪ್ಪಂದವನ್ನು ಗೌರವಿಸಬೇಕು. ಭಾರತೀಯ ಸೇನೆ ಗಡಿಯಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics