ಲಂಡನ್ ಆಪಾರ್ಟ್ ಮೆಂಟ್ ನಲ್ಲಿ ಅಗ್ನಿ ಅವಘಡ
ಲಂಡನ್: ಲಂಡನ್ ನ ವಸತಿ ಸಮುಚ್ಛಯದಲ್ಲಿ ಸಂಭವಿಸಿರುವ ಭೀಕರ ಅಗ್ನಿ ಅವಘಡದಿಂದಾಗಿ ಈವರೆಗೂ ಅಧಿಕೃತವಾಗಿ 6 ಮಂದಿ ಸಾವನ್ನಪ್ಪಿರುವ ವರದಿಯಾಗಿದೆ.
Massive fire engulfs 27-storey tower block at Latimer Road in West London
ಲಂಡನ್ನಿನ ನಾರ್ಥ್ ಕೆನ್ಸಿಂಗ್ಟನ್ ನಲ್ಲಿರುವ ಲಾಟಿಮರ್ ರಸ್ತೆಯ ಲ್ಯಾಂಕೆಸ್ಟರ್ ವೆಸ್ಟ್ ಎಸ್ಟೇಟ್ ನ ಅಪಾರ್ಟ್ ಮೆಂಟ್ ನಲ್ಲಿ ನಿನ್ನೆ ತಡರಾತ್ರಿ ಅಗ್ನಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಅಪಾರ್ಟ್ ಮೆಂಟ್ ನ ಸುಮಾರು 27 ಅಂತಸ್ತಿನ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ಪ್ರತಿಷ್ಠಿತ ಅಪಾರ್ಟ್ ಮೆಂಟ್ ನಲ್ಲಿ ಸುಮಾರು 120 ಮನೆಗಳಿದ್ದು, ನೂರಾರು ಮಂದಿ ನೆಲೆಸಿದ್ದರು ಎಂದು ತಿಳಿದುಬಂದಿದೆ.
ಬೆಂಕಿ ನಂದಿಸಲು ಸುಮಾರು 40 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿದ್ದು, 200ಕ್ಕೂ ಅಧಿಕ ಮಂದಿ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಒಳಗೆ ಹಾಗೂ ಹೊರಗೆ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಇನ್ನು ಘಟನೆಯಲ್ಲಿ ಈ ವರೆಗೂ ಸುಮಾರು 30 ಮಂದಿ ಗಾಯಾಳುಗಳನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಸಮೀಪದ 5 ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಅಂತೆಯೇ ಘಟನಾ ಸ್ಥಳದಲ್ಲಿ ಸುಮಾರು 20ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳು ಸನ್ನದ್ಧ ಸ್ಛಿತಿಯಲ್ಲಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ ಕಾರ್ಯದಲ್ಲಿ ತೊಡಗಿದೆ.
ಇನ್ನು ಆಪಾರ್ಟ್ ಮೆಂಟ್ ಮೇಲ್ಭಾಗದ ನಿವಾಸಗಳಿಂದ ಇನ್ನೂ ಜನರ ಕೂಗಾಟ ಕೇಳಿಬರುತ್ತಿದ್ದು, ಅವರ ರಕ್ಷಣೆಗೆ ವ್ಯಾಪಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪ್ರಸ್ತುತ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗುತ್ತಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos