ಢಾಕಾ: ಬಾಂಗ್ಲಾದೇಶದಲ್ಲಿ ಮಹಾಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 152ಕ್ಕೆ ಏರಿಕೆಯಾಗಿದೆ.
ಬಾಂಗ್ಲಾದೇಶದ ಚಿತ್ತಗಾಂಗ್, ರಂಗಮಟಿ ಮತ್ತು ಬಂದಾರ್ ಬನ್ ನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು ಈ ಭಾಗದಲ್ಲಿ ಅತೀ ಹೆಚ್ಚು ಜನರು ಮೃತಪಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಭೂಕುಸಿತದಿಂದಾಗಿ ಹಲವು ಮಂದಿ ನಾಪತ್ತೆಯಾಗಿದ್ದು, ನೂರಾರು ಮಂದಿ ನೆಲೆ ಕಳೆದುಕೊಂಡಿದ್ದಾರೆ. ಇನ್ನು ನಾಪತ್ತೆಯಾಗಿರುವವರಿಗಾಗಿ ರಕ್ಷಣ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ವಿಪತ್ತು ನಿರ್ವಹಣೆ ಇಲಾಖೆ ನಿರ್ದೇಶಕ ರಿಯಾಜ್ ಅಹಮ್ಮದ್ ಹೇಳಿದ್ದಾರೆ.