ವಿದೇಶ

ಲಂಡನ್ ಅಗ್ನಿ ಅವಘಡ: ಸಾವಿನ ಸಂಖ್ಯೆ 30ಕ್ಕೆ ಏರಿಕೆ

Lingaraj Badiger
ಲಂಡನ್: ಲಂಡನ್ ನ ವಸತಿ ಸಮುಚ್ಛಯದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 30ಕ್ಕೆ ಏರಿಕೆಯಾಗಿದೆ ಮತ್ತು ಬೆಂಕಿಯನ್ನು ಈಗ ಸಂಪೂರ್ಣ ನಂದಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಅಗ್ನಿ ದುರಂತದಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಕಮಾಂಡರ್ ಸ್ಟುವರ್ಟ್ ಕ್ಯಾಂಡಿ ಅವರು ಹೇಳಿದ್ದಾರೆ. ಅಲ್ಲದೆ ಬೆಂಕಿಯನ್ನು ಉದ್ದೇಶಪೂರ್ವಕವಾಗಿ ಹಚ್ಚಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ಬುಧವಾರ ಲಂಡನ್ನಿನ ನಾರ್ಥ್ ಕೆನ್ಸಿಂಗ್ಟನ್ ನಲ್ಲಿರುವ ಲಾಟಿಮರ್ ರಸ್ತೆಯ ಲ್ಯಾಂಕೆಸ್ಟರ್ ವೆಸ್ಟ್ ಎಸ್ಟೇಟ್ ನ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆಯೇ ಅಪಾರ್ಟ್ ಮೆಂಟ್ ನ 24 ಅಂತಸ್ತಿನ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿತ್ತು. ಈ ಪ್ರತಿಷ್ಠಿತ ಅಪಾರ್ಟ್ ಮೆಂಟ್ ನಲ್ಲಿ ಸುಮಾರು 120 ಮನೆಗಳಿದ್ದು, ಅಗ್ನಿ ಅವಘಡದಲ್ಲಿ ಇದುವರೆಗೆ ಕನಿಷ್ಠ 30 ಮಂದಿ ಸಜೀವ ದಹನವಾಗಿದ್ದಾರೆ ಮತ್ತು 50ಕ್ಕು ಹೆಚ್ಚು ಜನ ಗಾಯಗೊಂಡಿದ್ದಾರೆ.
ಇನ್ನು ಪ್ರಾಥಮಿಕ ತನಿಖೆಯ ಪ್ರಕಾರ ಈ ಅಗ್ನಿ ದುರಂತಕ್ಕೆ ಫ್ರಿಡ್ಜ್ ಸ್ಫೋಟವೇ ಕಾರಣ ಎಂದು ಹೇಳಲಾಗುತ್ತಿದೆ.
SCROLL FOR NEXT