ಘಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ನಿಂತಿರುವುದು 
ವಿದೇಶ

ಲಂಡನ್: ಮಸೀದಿ ಬಳಿ ಜನರ ಮೇಲೆ ಹರಿದ ವಾಹನ- ಓರ್ವ ಸಾವು, 8 ಜನರಿಗೆ ಗಾಯ

ಉತ್ತರ ಲಂಡನ್'ನ ಮಸೀದಿಯೊಂದರ ಬಳಿ ಪಾದಚಾರಿಗಳ ಮೇಲೆ ವಾಹನವೊಂದು ಹರಿದಿದ್ದು, ಹಲವರಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ...

ಲಂಡನ್: ಉತ್ತರ ಲಂಡನ್'ನ ಮಸೀದಿಯೊಂದರ ಬಳಿ ಪಾದಚಾರಿಗಳ ಮೇಲೆ ವಾಹನವೊಂದು ಹರಿದಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ 8 ಜನರಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ. 
ಫಿನ್ಸ್ಬುರಿ ಪಾರ್ಕ್ ಮಸೀದಿ ಬಳಿಯಿರುವ ಮುಸ್ಲಿಮ್ ವೆಲ್ಫೇರ್ ಹೌಸ್ ಬಳಿ ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ನೆರೆದಿದ್ದರು. ಈ ವೇಳೆ ಸ್ಥಳಕ್ಕೆ ಬಂದಿರುವ ವಾಹನವೊಂದು ಏಕಾಏಕಿ ಜನರ ಮೇಲೆ ಹರಿದಿದೆ. 
ಮಸೀದಿಯಿಂದ ಹೊರ ಬರುತ್ತಿದ್ದಂತೆಯೇ ಜನರ ಮೇಲೆ ವಾಹನ ಹರಿದಿತ್ತು. ಸಂತ್ರಸ್ತರ ಕುರಿತಂತೆ ನಾವು ಪ್ರಾರ್ಥನೆ ಸಲ್ಲಿಸುತ್ತೇವೆ ಎಂದು ಬ್ರಿಟನ್ ಮುಸ್ಲಿಂ ಮಂಡಳಿ (ಎಂಸಿಬಿ) ಟ್ವಿಟರ್ ನಲ್ಲಿ ಹೇಳಿಕೊಂಡಿದೆ. 

ಬ್ರಿಟನ್ ಮುಸ್ಲಿಂ ಮಂಡಳಿ ಮುಖ್ಯಸ್ಥ ಹರುನ್ ಖಾನ್ ಮಾತನಾಡಿ, ರಂಜಾನ್ ಪ್ರಯುಕ್ತ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಉದ್ದೇಶಪೂರ್ವಕವಾಗಿಯೇ ಮುಸ್ಲಿಮರ ಮೇಲೆ ವಾಹನವನ್ನು ಹರಿಸಲಾಗಿದೆ ಎಂದು ಹೇಳಿದ್ದಾರೆ. 

ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಸ್ಥಳಕ್ಕೆ ಬಹು ಸಂಖ್ಯೆಯಲ್ಲಿ ವೈದ್ಯರು ಹಾಗೂ ತುರ್ತುಚಿಕಿತ್ಸಾ ವಾಹನಗಳು ಬಂದಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಹಿನ್ನಲೆಯಲ್ಲಿ ಲಂಡನ್ ನ ಹಲವೆಡೆ ಸಂಚಾರ ದಟ್ಟಣೆ ಕೂಡ ನಿರ್ಮಾಣವಾಗಿದೆ ಎಂದು ವರದಿಗಳು ತಿಳಿಸಿವೆ. 

ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ .ಪ್ರಸ್ತುತ ವಾಹನ ಚಾಲಕನನ್ನು ಬಂಧನಕ್ಕೊಳಪಡಿಸಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

SCROLL FOR NEXT