ವಿದೇಶ

ದಕ್ಷಿಣ ಚೀನಾ ಸಮುದ್ರದಲ್ಲಿ ಯುಎಸ್, ಭಾರತದಿಂದ ಶಾಂತಿ ಭಂಗವಾಗುದಿಲ್ಲವೆಂಬ ವಿಶ್ವಾಸವಿದೆ: ಚೀನಾ

Srinivas Rao BV
ಬೀಜಿಂಗ್: ದಕ್ಷಿಣ ಚೀನಾ ಸಮುದ್ರದಲ್ಲಿ ಅಮೆರಿಕ ಹಾಗೂ ಭಾರತ ಶಾಂತಿ ಭಂಗ ಉಂಟು ಮಾಡುವುದಿಲ್ಲವೆಂಬ ವಿಶ್ವಾಸವಿದೆ ಎಂದು ಚೀನಾ ಹೇಳಿದೆ. 
ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದಕ್ಷಿಣ ಚೀನಾ ಸಮುದ್ರದ ವಿಷಯ ಪ್ರಸ್ತಾಪವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಚೀನಾದ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.  ಚೀನಾ ಹಾಗೂ ಇತರ ಏಷ್ಯಾ ರಾಷ್ಟ್ರಗಳ ಶ್ರಮದಿಂದ ದಕ್ಷಿಣ ಚೀನಾ ಸಮುದ್ರದಲ್ಲಿ ಶಾಂತಿಯ ವಾತಾವರಣ ಉಂಟಾಗುತ್ತಿದೆ. ಈ ಹಂತದಲ್ಲಿ ಅಮೆರಿಕ ಮತ್ತು ಭಾರತ ಶಾಂತಿ ಭಂಗ ಮಾಡುವುದಿಲ್ಲ ಎಂಬ ಭರವಸೆ ಇದೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ, 
ಪ್ರಧಾನಿ ಮೋದಿ-ಟ್ರಂಪ್ ನಡುವಿನ ದ್ವಿಪಕ್ಷೀಯ ಮಾತುಕತೆ ವೇಳೆಯಲ್ಲಿ ದಕ್ಷಿಣ ಚೀನಾ ಸಮುದ್ರ ವಿಷಯವೂ ಪ್ರಸ್ತಾಪವಾಗಲಿದೆ ಎಂದು ಅಮೆರಿಕ ಮಾಧ್ಯಮ ಕಾರ್ಯದರ್ಶಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಚೀನಾ  ದಕ್ಷಿಣ ಚೀನಾ ಸಮುದ್ರದಲ್ಲಿ ಅಮೆರಿಕ ಹಾಗೂ ಭಾರತ ಶಾಂತಿ ಭಂಗ ಉಂಟು ಮಾಡುವುದಿಲ್ಲವೆಂಬ ವಿಶ್ವಾಸವಿದೆ ಎಂದು ಹೇಳಿದೆ.
 ಭಾರತದ ಎನ್ ಎಸ್ ಜಿ ಗೆ ಬೆಂಬಲವಿಲ್ಲ
ಇದೇ ವೇಳೆ ಚೀನಾ ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದು ಮತ್ತೆ ಹಳೆಯ ರಾಗವನ್ನೇ ಮುಂದುವರೆಸಿ, ಭಾರತದ ಎನ್ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ನೀಡುವುದಿಲ್ಲ ಎಂಬ ಸಂದೇಶ ರವಾನೆ ಮಾಡಿದೆ. 
SCROLL FOR NEXT