ಇಸ್ಲಾಮಾಬಾದ್: ಇಂಡೋ-ಪಾಕ್ ಸಮಸ್ಯೆ ನಿವಾರಣೆಗೆ ರಾಜತಾಂತ್ರಿಕ ಪ್ರಯತ್ನಗಳನ್ನು ಚುರುಕುಗೊಳಿಸುವಂತೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು ಹಿರಿಯ ಅಧಿಕಾರಿಗಳಿಗೆ ನಿರ್ದೇಶಿದ್ದಾರೆ.
ನವಾಜ ಷರೀಫ್ ಅವರು ವಿದೇಶಾಂಗ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ಕರೆದಿದ್ದ ಗಡಿ ಸಮಸ್ಯೆ ಸೇರಿದಂತೆ ಭಾರತದೊಂದಿಗಿನ ಸಮಸ್ಯೆಗಳ ನಿವಾರಣೆಗಾಗಿ ಕೂಡಲೇ ರಾಜತಾಂತ್ರಿಕ ಪ್ರಯತ್ನಗಳನ್ನು ವೇಗಗೊಳಿಸುವಂತೆ ಸೂಚಿಸಿದ್ದಾರೆ. ಜತೆಗೆ ದೇಶದ ಭದ್ರತೆ ವಿಚಾರದಲ್ಲಿ ಯಾವುದೇ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.
ಪಾಕಿಸ್ತಾನ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ ಎಂದು ಪುನರುಚ್ಛರಿಸಿದ ಷರೀಫ್ ಪ್ರಾದೇಶಿಕ ಭದ್ರತಾ ಪರಿಸ್ಥಿತಿ ಮತ್ತು ಪಾಕಿಸ್ತಾನದ ರಾಜತಾಂತ್ರಿಕ ತಂತ್ರವನ್ನು ಸಭೆಯಲ್ಲಿ ಚರ್ಚಿಸಲಾಗಿದೆ.
ಉನ್ನತ ಮಟ್ಟದ ಸಭೆಯಲ್ಲಿ ನವಾಜ್ ಷರೀಫ್ ಸೇರಿದಂತೆ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜೀಜ್ ಮತ್ತು ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics