ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಹಫೀಜ್ ಸಯೀದ್ ಬೆಂಬಲಿತ ಸಂಘಟನೆಯನ್ನು ನಿಷೇಧಿಸಿದ ಪಾಕಿಸ್ತಾನ

2008 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಉಗ್ರ ಸಂಘಟನೆಯ ಸಹ ಸಂಘಟನೆಯನ್ನು ಪಾಕಿಸ್ತಾನ ನಿಷೇಧಿಸಿದೆ.

ಹಫೀಜ್ ಸಯೀದ್
Srinivas Rao BV
Updated On : 30 Jun 2017, 4:54 am
ನವದೆಹಲಿ: 2008 ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಉಗ್ರ ಸಂಘಟನೆಯ ಸಹ ಸಂಘಟನೆಯನ್ನು ಪಾಕಿಸ್ತಾನ ನಿಷೇಧಿಸಿದೆ. 
ಹಫೀಜ್ ಸಯೀದ್ ಬೆಂಬಲಿತ ತೆಹ್ರೀಕ್-ಎ-ಆಜಾದಿ ಉಗ್ರ ಸಂಘಟನೆಯನ್ನು ಪಾಕಿಸ್ತಾನ ರದ್ದುಗೊಳಿಸಿದ್ದು, ಪಾಕಿಸ್ತಾನದ ಭಯೋತ್ಪಾದನೆಯ ನಿಗ್ರಹಕ್ಕಾಗಿ ಇರುವ ರಾಷ್ಟ್ರೀಯ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಭಯೋತ್ಪಾದಕ ಸಂಘಟನೆಯ ಹೆಸರನ್ನು ನಿಷೇಧಿತ ಉಗ್ರ ಸಂಘಟನೆಗಳ ಪಟ್ಟಿಗೆ ಸೇರಿಸಲಾಗಿದೆ. 
ಜೂ.8 ರಂದು ಉಗ್ರ ಸಂಘಟನೆಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ ಎಂಬ ಬಗ್ಗೆ ವರದಿ ಪ್ರಕಟವಾಗಿದ್ದು, ಇದಕ್ಕೂ ಮುನ್ನ ಜನವರಿ ತಿಂಗಳಲ್ಲಿ ಪಾಕಿಸ್ತಾನ ಉಗ್ರ ಹಫೀಜ್ ಸಯೀದ್ ನ ಉಗ್ರ ಸಂಘಟನೆಯನ್ನು ಅಂಡರ್ ವಾಚ್ ಪಟ್ಟಿಗೆ ಸೇರಿಸಿ, ಹಫೀಜ್ ಸಯೀದ್ ಗೆ ಗೃಹ ಬಂಧನ ವಿಧಿಸಿತ್ತು. ಇದಾದ ಬಳಿಕ ಉಗ್ರ ಹಫೀಜ್ ಸಯೀದ್ ಜೆಯುಡಿ ಉಗ್ರ ಸಂಘಟನೆಯ ಕೆಲಸಗಲನ್ನು ತೆಹ್ರೀಕ್-ಎ-ಆಜಾದಿ ಉಗ್ರ ಸಂಘಟನೆಗೆ ವಹಿಸಿದ್ದ ಎಂದು ತಿಳಿದುಬಂದಿದೆ. 

Advertisement

Advertisement

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ಪಾಕಿಸ್ತಾನ ಹಫೀಜ್ ಸಯೀದ್ ನೇತೃತ್ವದ ಉಗ್ರ ಸಂಘಟನೆಯ ಸಹ ಸಂಘಟನೆಯನ್ನು ನಿಷೇಧಿಸಿದೆ. 
ಇದೇ ವೇಳೆ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ರಾಷ್ಟ್ರಗಳ ಪಟ್ಟಿಯನ್ನು ಇಂಟರ್ ಗೌರ್ನಮೆಂಟಲ್ ಫೈನಾನ್ಶಿಯಲ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್)  ಸಹ ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳನ್ನು ಪಟ್ಟಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ಎಚ್ಚೆತ್ತುಕೊಂಡು ಈ ನಿರ್ಧಾರ ಕೈಗೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement