ಸಂಗ್ರಹ ಚಿತ್ರ 
ವಿದೇಶ

8 ಮುಸ್ಲಿಂ ರಾಷ್ಟ್ರಗಳ ಪ್ರಯಾಣಿಕರ ಎಲೆಕ್ಟ್ರಿಕ್ ವಸ್ತುಗಳ ಮೇಲೆ ಅಮೆರಿಕ ವಿಮಾನಗಳಲ್ಲಿ ನಿಷೇಧ!

ಮಹತ್ವದ ಬೆಳವಣಿಗೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ 8 ಮುಸ್ಲಿಂ ರಾಷ್ಟ್ರಗಳ ಪ್ರಯಾಣಿಕರು ವಿಮಾನಗಳಲ್ಲಿ ಎಲೆಕ್ಟ್ರಿಕ್ ವಸ್ತುಗಳನ್ನು ತರುವಂತಿಲ್ಲ ಎಂದು ಹೇಳಿ ನಿಷೇಧ ಹೇರಿದೆ.

ವಾಷಿಂಗ್ಟನ್: ಮಹತ್ವದ ಬೆಳವಣಿಗೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ 8 ಮುಸ್ಲಿಂ ರಾಷ್ಟ್ರಗಳ ಪ್ರಯಾಣಿಕರು ವಿಮಾನಗಳಲ್ಲಿ ಎಲೆಕ್ಟ್ರಿಕ್ ವಸ್ತುಗಳನ್ನು ತರುವಂತಿಲ್ಲ ಎಂದು ಹೇಳಿ ನಿಷೇಧ ಹೇರಿದೆ.

ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ಒಟ್ಟು 8 ರಾಷ್ಟ್ರಗಳ ವಿಮಾನ ಪ್ರಯಾಣಿಕರಿಗೆ ಈ ಹೊಸ ನಿಷೇಧ ಅನ್ವಯಿಸಲಿದ್ದು, ಈ ದೇಶದ ಪ್ರಯಾಣಿಕರು ಮೊಬೈಲ್ ಗಿಂತ ದೊಡ್ಡದಾದ ಯಾವುದೇ ರೀತಿಯ ಎಲೆಕ್ಟ್ರಿಕ್ ವಸ್ತುಗಳನ್ನು  ವಿಮಾನದಲ್ಲಿ ತರುವಂತಿಲ್ಲ ಎಂದು ಅಮೆರಿಕ ಸರ್ಕಾರ ಹೇಳಿದೆ. ಅಮೆರಿಕ ಸರ್ಕಾರದ ಈ ನಿಷೇಧದಿಂದಾಗಿ ಈ 8 ದೇಶಗಳ ಪ್ರಯಾಣಿಕರು ವಿಮಾನದಲ್ಲಿ ಲ್ಯಾಪ್ ಟಾಪ್, ಐಪಾಡ್, ಕ್ಯಾಮೆರಾ ಸೇರಿದಂತೆ ವಿವಿಧ ರೀತಿಯ  ಉಪಕರಣಗಳನ್ನು ವಿಮಾನದೊಳಗೆ ತರುವಂತಿಲ್ಲ.

ಈಗಾಗಲೇ ಅಮೆರಿಕದ ಪ್ರಮುಖ 12 ವಿಮಾನಯಾನ ಸಂಸ್ಥೆಗಳಿಗೆ ಈ ಬಗ್ಗೆ ಸೂಚನೆ ರವಾನಿಸಲಾಗಿದ್ದು, ಪ್ರಮುಖವಾಗಿ ಅಮೆರಿಕದಿಂದ ಈ 8 ರಾಷ್ಟ್ರಗಳಿಗೆ ತಡೆರಹಿತವಾಗಿ ಪ್ರಯಾಣಿಸುವ ವಿಮಾನಗಳಲ್ಲಿ ಈ ನಿಯಮ ಜಾರಿಗೆ  ಬರಲಿದೆ. ಜೋರ್ಡಾನ್, ಈಜಿಪ್ಟ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್  ರಾಷ್ಟ್ರಗಳು ಕೂಡ ಈ 8 ರಾಷ್ಟ್ರಗಳ ಪಟ್ಟಿಯಲ್ಲಿ ಸೇರಿದೆ ಎಂದು ಹೇಳಲಾಗುತ್ತಿದೆ.

ಭದ್ರತಾ ಕಾರಣಗಳಿಂದಾಗಿ ಅಮೆರಿಕ ಸರ್ಕಾರ ಈ ನಿರ್ಣಯ ಕೈಗೊಂಡಿದೆ ಎಂದು ಹೇಳಲಾಗುತ್ತಿದ್ದರೂ ಈ ಬಗ್ಗೆ ಅಮೆರಿಕ ಅಧಿಕಾರಿಗಳು ಯಾವುದೇ ರೀತಿಯ ಅಧಿೃಕೃತ ಪ್ರಕಟಣೆ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT