ಡೊನಾಲ್ಡ್ ಟ್ರಂಪ್ 
ವಿದೇಶ

ಒಬಾಮ ಕೇರ್ ರದ್ದತಿಗೆ ಅಮೆರಿಕ ಜನಪ್ರತಿನಿಧಿಗಳ ಸದನ ನಕಾರ: ಡೊನಾಲ್ಡ್ ಟ್ರಂಪ್ ಗೆ ತೀವ್ರ ಹಿನ್ನಡೆ

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರ ಆಡಳಿತಾವಧಿಯಲ್ಲಿ ಪ್ರಾರಂಭಿಸಿದ್ದ ಒಬಾಮ ಕೇರ್ ಯೋಜನೆಯನ್ನು ರದ್ದುಗೊಳಿಸಲು ಅಮೆರಿಕಾದ ಜನಪ್ರತಿನಿಧಿಗಳ ಸದನ ನಿರಾಕರಿಸಿದೆ.

ವಾಷಿಂಗ್ ಟನ್: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರ ಆಡಳಿತಾವಧಿಯಲ್ಲಿ ಪ್ರಾರಂಭಿಸಿದ್ದ ಒಬಾಮ ಕೇರ್ ಯೋಜನೆಯನ್ನು ರದ್ದುಗೊಳಿಸಲು ಅಮೆರಿಕಾದ ಜನಪ್ರತಿನಿಧಿಗಳ ಸದನ( ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್) ನಿರಾಕರಿಸಿದ್ದು, ಮಸೂದೆ ರದ್ದತಿಗೆ ಅಗತ್ಯವಿರುವ ಬಹುಮತಗಳಿಸಲು ವಿಫಲವಾಗಿರುವ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ. 
ಲೋಕಸಭೆಯ ಮಾದರಿಯಲ್ಲಿರುವ ಅಮೆರಿಕಾದ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ ನಲ್ಲಿ 435 ಸದಸ್ಯರಿದ್ದು, ಡೊನಾಲ್ಡ್ ಟ್ರಂಪ್ ಪ್ರತಿನಿಧಿಸುವ ರಿಪಬ್ಲಿಕನ್ ಪಕ್ಷ 235 ಸದಸ್ಯರ ಸರಳ ಬಹುಮತ ಹೊಂದಿದೆ. ಆದರೆ ರಿಪಬ್ಲಿಕನ್ ಪಕ್ಷದ ಕೆಲವು ಸದಸ್ಯರೇ ಮಸೂದೆ ರದ್ದತಿಗೆ ಅಗತ್ಯವಿದ್ದ 215 ಮತಗಳನ್ನು ಗಳಿಸಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ ನ ಸಭಾಧ್ಯಕ್ಷರು ಒಬಾಮ ಹೆಲ್ತ್ ಕೇರ್ ಮಸೂದೆಗೆ ಪರ್ಯಾಯವಾಗಿ ರೂಪಿಸಲಾಗಿದ್ದ ಹೊಸ ಮಸೂದೆಯನ್ನು ವಾಪಸ್ ಪಡೆದಿದ್ದಾರೆ. ಹೌಸ್ ಆಫ್ ರೆಪ್ರೆಸೆಂಟೆಟೀವ್ಸ್ ನಲ್ಲಿ ಹೊಸ ಮಸೂದೆ ಅಂಗೀಕಾರವಾಗದೇ ಇರುವುದು ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಉಂಟಾದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್