ವಾಷಿಂಗ್ ಟನ್: ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದಲ್ಲಿ ಅಮೆರಿಕಾಗೆ ಭೇಟಿ ನೀಡಲಿದ್ದಾರೆ ಎಂದು ಶ್ವೇತ ಭವನ ತಿಳಿಸಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಅಭಿನಂದನೆ ಸಲ್ಲಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ್ದರು. ಈ ಬಗ್ಗೆ ಮಾಹಿತಿ ನೀಡಿರುವ ಶ್ವೇತ ಭವನ ಈ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎದುರು ನೋಡುತ್ತಿದ್ದಾರೆ ಎಂದು ಶ್ವೇತ ಭವನ ಪ್ರಕಟಣೆಯಲ್ಲಿ ತಿಳಿಸಿದೆ.