ಶ್ರೀಲಂಕಾ ನಿರ್ಬಂಧದ ನಂತರ ಕರಾಚಿಯತ್ತ ಚೀನಾ ಜಲಾಂತರ್ಗಾಮಿ ನೌಕೆಗಳು
ಶ್ರೀಲಂಕಾ ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ ಚೀನಾದ ಜಲ್ಲಾಂತರ್ಗಾಮಿ ನೌಕೆಗಳು ಕರಾಚಿಯತ್ತ ಪ್ರಯಾಣ ಬೆಳೆಸಿವೆ ಎಂದು ತಿಳಿದುಬಂದಿದೆ.
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2 ದಿನಗಳ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದ ಹಿನ್ನೆಲೆಯಲ್ಲಿ ಚೀನಾ ದೇಶದ ಜಲಾಂತರ್ಗಾಮಿ ನೌಕೆಗಳನ್ನು ಲಂಕಾ ಸಮುದ್ರ ಗಡಿಯಲ್ಲಿ ನಿಲುಗಡೆ ಮಾಡಲು ಪ್ರಧಾನಿ ರನಿಲ್ ವಿಕ್ರಂ ಸಿಂಘೆ ನಿರಾಕರಿಸಿದ್ದರು. ಶ್ರೀಲಂಕಾ ನಿರ್ಬಂಧ ವಿಧಿಸಿದ ಹಿನ್ನೆಲೆಯಲ್ಲಿ ಚೀನಾದ ಜಲ್ಲಾಂತರ್ಗಾಮಿ ನೌಕೆಗಳು ಕರಾಚಿಯತ್ತ ಪ್ರಯಾಣ ಬೆಳೆಸಿವೆ ಎಂದು ತಿಳಿದುಬಂದಿದೆ.
ಶ್ರೀಲಂಕಾದಲ್ಲಿ ಚೀನಾದ ಸರ್ಕಾರಿ ಸ್ವಾಮ್ಯದ ಮೆಗಾ ಕಂಟೇನರ್ ಟರ್ಮಿನಲ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಇದೇ ಕಾರಣಕ್ಕೆ ಚೀನಾ ತನ್ನ ಸಬ್ ಮೆರಿನ್ ಅನ್ನು ಶ್ರೀಲಂಕಾದ ಸಮುದ್ರ ಗಡಿಯಲ್ಲಿ ಲಂಗರು ಹಾಕಲು ಅನುಮತಿ ಕೋರಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಪ್ರವಾಸದಲ್ಲಿದ್ದ ಹಿನ್ನೆಲೆಯಲ್ಲಿ ಲಂಕಾ ಪ್ರಧಾನಿ ಅನುಮತಿ ನಿರಾಕರಿಸಿದ್ದರು. ಲಂಕಾ ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಈಗ ಚೀನಾ ಜಲಾಂತರ್ಗಾಮಿ ನೌಕೆಗಳು ಕರಾಚಿಯತ್ತ ತೆರಳಲಿವೆ ಎಂದು ವಿಶ್ಲೇಷಿಸಲಾಗುತಿತ್ದೆ.
ಹಿಂದೂ ಮಹಾಸಾಗರದಲ್ಲಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳುವುದಕ್ಕೆ ಯತ್ನಿಸುತ್ತಿರುವ ಚೀನಾ, 2013 ರಿಂದಲೂ ಸಹ ಪರಮಾಣು ಮತ್ತು ಡೀಸೆಲ್-ವಿದ್ಯುತ್ ಜಲಾಂತರ್ಗಾಮಿಗಳನ್ನು ಹಿಂದೂ ಮಹಾಸಾಗರಕ್ಕೆ ಕಳಿಸುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.