ಲಾಹೋರ್: ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಬೆನ್ನಲ್ಲೇ, ಜಾಧವ್ ವಿರುದ್ಧ ಐಸಿಜೆ ಎದುರು ವಾದ ಮಂಡಿಸಲು ಪಾಕಿಸ್ತಾನ ಸಿದ್ಧತೆ ನಡೆಸಿದೆ.
ಮೇ.15 ರಂದು ಐಸಿಜೆ ಎದುರು ಪ್ರಕರಣದ ವಿಚಾರಣೆ ನಡೆಯಲಿದ್ದು, ಪಾಕಿಸ್ತಾನ ತನ್ನ ವಾದವನ್ನು ಮಂಡಿಸಲು ಸಕಲ ಸಿದ್ಧತೆ ನಡೆಸಿದೆ. ಇದಕ್ಕಾಗಿ ನಿರಂತರ 2 ದಿನಗಳ ಕಸರತ್ತು ನಡೆಸಿದ್ದು, ವಿದೇಶಾಂಗ ಇಲಾಖೆ ಅಧಿಕಾರಿಗಳು, ಕಾನೂನು ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು ಪಾಕಿಸ್ತಾನದ ಪ್ರಧಾನಿಗೆ ಅಟಾರ್ನಿ ಜನರಲ್ ಶಿಫಾರಸ್ಸುಗಳನ್ನು ಕಳಿಸಿದ್ದಾರೆ. ಪಾಕಿಸ್ತಾನದ ಪರವಾಗಿ ಐಸಿಜೆ ಎದುರು ಅಲ್ಲಿನ ಅಟಾರ್ನಿ ಜನರಲ್ ಅಸ್ಟರ್ ಔಸಾಫ್ ವಾದ ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಪಾಕಿಸ್ತಾನ, ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ ಮಿತಿ ಮೀರಿ ವರ್ತಿಸಿದೆ ಎಂದು ಪಾಕಿಸ್ತಾನ ಅಂತಾರಾಷ್ಟ್ರೀಯ ನ್ಯಾಯಾಲಯವನ್ನು ಟೀಕಿಸಿದ್ದು, ವಿಷಯಾಂತರದ ತಂತ್ರ ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics