ಪಾಕಿಸ್ತಾನ ವಿದೇಶಾಂಗ ಇಲಾಖೆ ವಕ್ತಾರ ನಫೀಸ್ ಝಕಾರಿಯಾ 
ವಿದೇಶ

ಕುಲಭೂಷಣ್ ಜಾದವ್ ಬಗ್ಗೆ ಅಂತಾರಾಷ್ಟ್ರೀಯ ಕೋರ್ಟ್ ನ ತೀರ್ಪನ್ನು ಒಪ್ಪುವುದಿಲ್ಲ: ಪಾಕಿಸ್ತಾನ

ಕುಲಭೂಷಣ್ ಜಾದವ್ ಮರಣದಂಡನೆ ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ತಂದಿರುವುದಕ್ಕೆ...

ನವದೆಹಲಿ: ಕುಲಭೂಷಣ್ ಜಾದವ್ ಮರಣದಂಡನೆ ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯ ಕೋರ್ಟ್ ತಂದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿರುವ ಪಾಕಿಸ್ತಾನ ಸರ್ಕಾರ, ಸದ್ಯದಲ್ಲಿಯೇ ಕೇಸಿಗೆ ಸಂಬಂಧಪಟ್ಟಂತೆ ಹೆಚ್ಚಿನ ಸಾಕ್ಷಿಗಳನ್ನು ನೀಡುತ್ತೇವೆ ಎಂದು ಹೇಳಿದೆ.
ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಜಾಧವ್ ವಿರುದ್ಧ ಇನ್ನಷ್ಟು ಬಲವಾದ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ನೀಡುತ್ತೇವೆ ಎಂದು ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ನಫೀಸ್ ಝಕಾರಿಯಾ ತಿಳಿಸಿದ್ದಾರೆ.
ಭಾರತದ ವಿರುದ್ಧ ಹರಿಹಾಯ್ದ ಅವರು ಜಾಧವ್ ಕೇಸನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗುವ ಮೂಲಕ ಭಾರತ ತನ್ನ ನಿಜ ಬಣ್ಣವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ ಎಂದರು.
ಭಾರತದ ನಿಜಬಣ್ಣ ಜಗತ್ತಿನ ಮುಂದೆ ಬಯಲಾಗಲಿದೆ. ವಿಧ್ವಂಸಕತೆ, ಭಯೋತ್ಪಾದನೆ ಮತ್ತು ಅಧೀನ ಚಟುವಟಿಕೆಗ ಬಗ್ಗೆ ಜಾಧವ್ ಒಂದಲ್ಲ ಎರಡು ಬಾರಿ ತಪ್ಪೊಪ್ಪಿಕೊಂಡಿದ್ದಾರೆ. ಜಾಧವ್ ರ ಸಹಯೋಗ ಪಡೆಯುವಿಕೆ ಕುರಿತು ಪಾಕಿಸ್ತಾನದ ಮನವಿಗೆ ಭಾರತ ಧನಾತ್ಮಕವಾಗಿ ಸ್ಪಂದಿಸಲಿಲ್ಲ. ಮುಗ್ಧ ಪಾಕಿಸ್ತಾನೀಯರ ಸಾವಿಗೆ ಕಾರಣನಾದ ವ್ಯಕ್ತಿಯನ್ನು ಭಾರತ ರಕ್ಷಿಸಲು ನೋಡುತ್ತಿದೆ ಎಂದು ಆಪಾದಿಸಿದರು.
ಪಾಕಿಸ್ತಾನ ದೇಶದ ಹಿತದೃಷ್ಟಿಯಿಂದ ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇವೆ ಎಂದು ಝಕಾರಿಯಾ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT