ಸಂಗ್ರಹ ಚಿತ್ರ 
ವಿದೇಶ

ಮುಂಬೈ ದಾಳಿಕೋರ ಅಜ್ಮಲ್ ಕಸಬ್ ಗಿಂತ ಕುಲಭೂಷಣ್ ಜಾದವ್ ಅತ್ಯಂತ ಅಪಾಯಕಾರಿ: ಮುಷರಫ್

ಮುಂಬೈ ಮೇಲೆ ದಾಳಿ ಮಾಡಿದ ಅಜ್ಮಲ್ ಕಸಬ್ ಗಿಂತ ಪಾಕಿಸ್ತಾನದಲ್ಲಿ ಗೂಢಚಾರಿಕೆ ನಡೆಸಿದ ಭಾರತ ಕುಲಭೂಷಣ್ ಜಾಧವ್ ಅತ್ಯಂತ ಅಪಾಯಕಾರಿ ಎಂದು ಪಾಕ್ ಮಾಜಿ ಆಧ್ಯಕ್ಷ ಫರ್ವೇಜ್ ಮುಷರಫ್ ಹೇಳಿದ್ದಾರೆ.

ಇಸ್ಲಾಮಾಬಾದ್: ಮುಂಬೈ ಮೇಲೆ ದಾಳಿ ಮಾಡಿದ ಅಜ್ಮಲ್ ಕಸಬ್ ಗಿಂತ ಪಾಕಿಸ್ತಾನದಲ್ಲಿ ಗೂಢಚಾರಿಕೆ ನಡೆಸಿದ ಭಾರತ ಕುಲಭೂಷಣ್ ಜಾಧವ್ ಅತ್ಯಂತ ಅಪಾಯಕಾರಿ ಎಂದು ಪಾಕ್ ಮಾಜಿ ಆಧ್ಯಕ್ಷ ಫರ್ವೇಜ್ ಮುಷರಫ್  ಹೇಳಿದ್ದಾರೆ.

ಕುಲಭೂಷಣ್ ಜಾದವ್ ಗೆ ಪಾಕಿಸ್ತಾನ ಮಿಲಿಟರಿ ಕೋರ್ಟ್ ನೀಡಿದ್ದ ಗಲ್ಲು ಶಿಕ್ಷೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಮುಷರಫ್,  "ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಮುಂಬೈ ದಾಳಿಯ ಉಗ್ರ ಅಜ್ಮಲ್ ಕಸಬ್‌ಗಿಂತ ಅಪಾಯಕಾರಿ. ಕಸಬ್ ಕೇವಲ ಮುಂಬೈ ಮೇಲೆ ದಾಳಿ ಮಾಡಿದವರ ಪೈಕಿ ಓರ್ವನಾಗಿದ್ದ. ಆದರೆ, ಜಾಧವ್  ಗೂಢಚಾರಿಯಾಗಿದ್ದು, ಪಾಕಿಸ್ತಾನದಲ್ಲಿ ಭಯೊತ್ಪಾದನೆ ಉತ್ತೇಜಿಸುವ ಮತ್ತು ಬೇಹುಗಾರಿಕೆ ಚಟುವಟಿಕೆಗಳ ಮೂಲಕ ನೂರಾರು ಜನರ ಸಾವಿಗೆ ಕಾರಣನಾಗಬಲ್ಲ ವ್ಯಕ್ತಿಯಾಗಿದ್ದಾನೆ ಎಂದು ಹೇಳಿದ್ದಾರೆ.

ಅಂತೆಯೇ ದೇಶದ ಭದ್ರತಾ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ರಾಜಿ ಸಹಿಸಲಸಾಧ್ಯ. ದೇಶದ ಭದ್ರತೆ ವಿಚಾರದಲ್ಲಿ ಯಾರೂ ಆದೇಶ ಮಾಡುವ ಹಾಗಿಲ್ಲ ಎಂದು ಮುಷರಫ್ ಅಂತಾರಾಷ್ಟ್ರೀಯ ನ್ಯಾಯಾಲಯದ  ತೀರ್ಪಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2001ರಲ್ಲಿ ಪಾಕಿಸ್ತಾನದ ಅಧ್ಯಕ್ಷರಾಗಿ ನಿಯೋಜನೆಗೊಂಡ ಮುಷರಫ್ ಮೇಲೆ ಆಡಳಿತ ದುರ್ಬಳಕೆ ಹಾಗೂ ತಮ್ಮ ಅಧಿಕಾರ ಉಳಿಸಿಕೊಳ್ಳಲು ದೇಶದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಹೇರಿದ್ದಾರೆ ಎಂಬ ದೇಶದ್ರೋಹ ಪ್ರಕರಣ  ದಾಖಲಾಗಿದೆ. ಸ್ವತಃ ಪಾಕಿಸ್ತಾನ ಸುಪ್ರೀಂ ಕೋರ್ಟ್ ಈ ಬಗ್ಗೆ ಮುಷರಫ್ ಗೆ ಈ ಹಿಂದೆ ಛೀಮಾರಿ ಹಾಕಿದೆ. ಹೀಗಿರುವಾಗ ಮುಷರಫ್ ಪಾಕಿಸ್ತಾನದ ಆಂತರಿಕ ಭದ್ರತೆ ಕುರಿತಂತೆ ಪಾಠ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್