ಸಾಂದರ್ಭಿಕ ಚಿತ್ರ 
ವಿದೇಶ

ಆತ್ಮಹತ್ಯೆಗಾಗಿ ವ್ಯಕ್ತಿ ಹಾರಿಸಿಕೊಂಡ ಗುಂಡು ಪ್ರಿಯತಮೆಗೂ ಹೊಕ್ಕಿ ಆಕೆಯ ಪ್ರಾಣ ತೆಗೆಯಿತು!

ಆತ್ಮಹತ್ಯೆ ಮಾಡಿಕೊಳ್ಳಲೆಂದು ಯತ್ನಿಸಿ ವ್ಯಕ್ತಿಯೊಬ್ಬ ಹಾರಿಸಿದ ಗುಂಡೊಂದು ಆತನ ಪ್ರಿಯತಮೆಗೂ ಹೊಕ್ಕಿ ಸಾವನ್ನಪ್ಪುವಂತೆ ಮಾಡಿರುವ ಘಟನೆಯೊಂದು ನಡೆದಿದೆ...

ವಾಷಿಂಗ್ಟನ್: ಆತ್ಮಹತ್ಯೆ ಮಾಡಿಕೊಳ್ಳಲೆಂದು ಯತ್ನಿಸಿ ವ್ಯಕ್ತಿಯೊಬ್ಬ ಹಾರಿಸಿದ ಗುಂಡೊಂದು ಆತನ ಪ್ರಿಯತಮೆಗೂ ಹೊಕ್ಕಿ ಸಾವನ್ನಪ್ಪುವಂತೆ ಮಾಡಿರುವ ಘಟನೆಯೊಂದು ನಡೆದಿದೆ. 
ವಿಕ್ಟರ್ ಸಿಬ್ಸನ್ 21 ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಬ್ರಿಟಾನಿ-ಮಾ ಹಾಗ್ (22) ಸಾವನ್ನಪ್ಪಿದ ಪ್ರಿಯತಮೆಯಾಗಿದ್ದಾಳೆ. 
ಕಳೆದ ತಿಂಗಳು ಘಟನೆ ಮಿಡ್ ಟೌನ್ ನಲ್ಲಿರುವ ಆಪಾರ್ಟ್ ಮೆಂಟ್ ವೊಂದರಲ್ಲಿ ಘಟನೆ ನಡೆದಿತ್ತು. ಜೋಡಿಗಳಿಬ್ಬರು ರಕ್ತದ ಮಡುವಿನಲ್ಲಿ ಬಿದ್ದಿರುವ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರು. ವಿಕ್ಟರ್ ಸಿಬ್ಸನ್ ತಲೆಗೆ ಗುಂಡು ಹೋಗಿ ನಂತರ ಆತನ ಗೆಳತಿಗೂ ಗುಂಡು ಹೊಕ್ಕಿತ್ತು. 
ಚಿಕಿತ್ಸೆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದ ಸಿಬ್ಸನ್ ಪ್ರಾಣಾಪಾಯದಿಂದ ಪಾರಾಗಿದ್ದರೆ, ಚಿಕಿತ್ಸೆ ಫಲಕಾರಿಯಾಗದೆ ಹಾಗ್ ಮೃತಪಟ್ಟಿದ್ದಳು. 
ಪ್ರಕರಣ ಸಂಬಂಧ ಕಳೆದ ಭಾನುವಾರ ಆರೋಪಿ ಸಿಬ್ಸನ್ ನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಪ್ರಕರಣ ಸಂಬಂಧ ಒಂದು ವೇಳೆ ಆರೋಪಿ ತಪ್ಪಿತಸ್ಥ ಎಂದು ಸಾಬೀತಾಗಿದ್ದೇ ಆದರೆ, ಆರೋಪಿಗೆ 99 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!