ಬಾಂಬ್ ದಾಳಿ ನಡೆದ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ 
ವಿದೇಶ

ಅಫ್ಘಾನಿಸ್ತಾನದಲ್ಲಿ ಆತ್ಮಾಹುತಿ ಕಾರ್ ಬಾಂಬ್ ದಾಳಿ, 13 ಮಂದಿ ಸಾವು

ಪೂರ್ವ ಅಫ್ಘಾನಿಸ್ತಾನದ ಖೋಸ್ಟ್ ನಗರದಲ್ಲಿ ಶನಿವಾರ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ 13 ಮಂದಿ..

ಖೋಸ್ಟ್: ಪೂರ್ವ ಅಫ್ಘಾನಿಸ್ತಾನದ ಖೋಸ್ಟ್ ನಗರದಲ್ಲಿ ಶನಿವಾರ ನಡೆದ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಮ್ಜಾನ್ ಉಪವಾಸ ಆರಂಭವಾದ ಮೊದಲ ದಿನವೇ ಈ ದಾಳಿ ನಡೆದಿದ್ದು, ಬಾಂಬ್ ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ. 
ಖೋಸ್ಟ್ ಪ್ರಾಂತ್ಯದಲ್ಲಿ ಸರ್ಕಾರಿ ಸೇನಾಪಡೆಯನ್ನು ಗುರಿಯಾಗಿಸಿಕೊಂಡು ಈ ಆತ್ಮಾಹುತಿ ದಾಳಿ ನಡೆಸಿದ್ದು, ದಾಳಿಯಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ನಜೀಬ್ ದನಿಶ್ ಅವರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಖೋಸ್ಟ್ ಪ್ರಾಂತೀಯ ಪಡೆ(ಕೆಪಿಎಫ್) ಸದಸ್ಯರು ಕೆಲಸಕ್ಕೆ ತೆರಳುತ್ತಿದ್ದ ವೇಳೆ ಒಂದು ಬಸ್ ನಿಲ್ದಾಣದಲ್ಲಿ ಈ ದಾಳಿ ನಡೆದಿದ್ದು, ದಾಳಿಯಲ್ಲಿ ಕೆಪಿಎಫ್ ಸದಸ್ಯರು ಹಾಗೂ ನಾಗರಿಕರು ಮೃತಪಟ್ಟಿದ್ದಾರೆ ಎಂದು ಖೋಸ್ಟ್ ಪ್ರಾಂತ್ಯದ ಪೊಲೀಸ್ ಮುಖ್ಯಸ್ಥ ಫೈಜುಲ್ಲಾ ಘೈರಾತ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್