ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಜತೆ ಕಾಲು ಕೆರೆದು ಕದನಕ್ಕಿಳಿಯುವ ಪಾಕಿಸ್ತಾನ ಇದೀಗ ಭಾರತದ ವಿರುದ್ಧವೇ ವಿಶ್ವಸಂಸ್ಥೆ ಮೊರೆ ಹೋಗಿದೆ.
ಕಾಶ್ಮೀರ ಕಣಿವೆಯಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಹಿಂಸೆಯನ್ನು ತಡೆಯಬೇಕು ಎಂದು ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ಸಮುದಾಯದ ಬಳಿ ಮನವಿ ಮಾಡಿಕೊಂಡಿದೆ.
ಗಡಿ ನಿಯಂತ್ರಣ ರೇಖೆಯಲ್ಲಿ ಭಾರತೀಯ ಯೋಧರು ಕದನ ವಿರಾಮ ಉಲ್ಲಂಘನೆ ನಡೆಸುತ್ತಿರುವುದರಿಂದ ಹಿಂಸೆಯಾಗುತ್ತಿರುವ ಬಗ್ಗೆ ಪಾಕಿಸ್ತಾನ ಪ್ರಧಾನಿಯವರಿಗೆ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಕಳವಳ ವ್ಯಕ್ತಪಡಿಸಿದ್ದಾರೆ.