ಬ್ರಿಟನ್ ಪೊಲೀಸರು 
ವಿದೇಶ

ಬ್ರಿಟನ್ ನಲ್ಲಿದ್ದಾರೆ 23,000 ಭಯೋತ್ಪಾದಕರು: ಗುಪ್ತಚರ ಇಲಾಖೆ ವರದಿ

ಅಲ್ಲಿನ ಗುಪ್ತಚರ ಇಲಾಖೆ ಬ್ರಿಟನ್ ನಲ್ಲಿ ಇನ್ನೂ 23 ಸಾವಿರ ಭಯೋತ್ಪಾದಕರಿದ್ದಾರೆ ಎಂಬ ಅಘಾತಕಾರಿ ಅಂಶವನ್ನು ಬಹಿರಂಗಗೊಳಿಸಿದೆ.

ಲಂಡನ್: ಕಳೆದ ವಾರ ಮ್ಯಾಂಚೆಸ್ಟರ್ ನಲ್ಲಿ ಆತ್ಮಾಹುತಿ ದಾಳಿ ನಡೆದಿದ್ದು ಬ್ರಿಟನ್ ನಲ್ಲಿ ಭಯೋತ್ಪಾದಕ ದಾಳಿಯ ಆತಂಕ ಮತ್ತಷ್ಟು ಹೆಚ್ಚಿದೆ. ಈ ನಡುವೆ ಅಲ್ಲಿನ ಗುಪ್ತಚರ ಇಲಾಖೆ ಬ್ರಿಟನ್ ನಲ್ಲಿ ಇನ್ನೂ 23 ಸಾವಿರ ಭಯೋತ್ಪಾದಕರಿದ್ದಾರೆ ಎಂಬ ಅಘಾತಕಾರಿ ಅಂಶವನ್ನು ಬಹಿರಂಗಗೊಳಿಸಿದೆ. 
ಬ್ರಿಟನ್ ನಾದ್ಯಂತ 23,000 ಭಯೋತ್ಪಾದಕರು ಸಕ್ರಿಯರಾಗಿದ್ದು, ಈ ಪೈಕಿ 3000 ಭಯೋತ್ಪಾದಕರಿಗೆ ದೇಶಕ್ಕೆ ಅತ್ಯಂತ ಹೆಚ್ಚು ಅಪಾಯ ಕಾದಿದ್ದು ವಿಚಾರಣೆಯನ್ನೂ ಎದುರಿಸುತ್ತಿದ್ದಾರೆ ಇನ್ನು 20000 ಭಯೋತ್ಪಾದಕರ ವಿರುದ್ಧವೂ ಈ ಹಿಂದೆ ವಿಚಾರಣೆ ನಡೆದಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ. 
ಇದೇ ವೇಳೆ ಮ್ಯಾಂಚೆಸ್ಟರ್ ಪೊಲೀಸರು ಆತ್ಮಾಹುತಿ ದಾಳಿ ನಡೆದಾಗಿನ ಸಿಸಿಟಿವಿ ಚಿತ್ರಗಳನ್ನು ಬಿಡುಗಡೆ ಮಾಡಿದ್ದು ದಾಳಿ ನಡೆಸಿದ ಉಗ್ರನ ಚಿತ್ರವೂ ಸೆರೆಯಾಗಿದೆ. ದಾಳಿಗೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದ್ದು 14 ಪ್ರದೇಶಗಳಲ್ಲಿ ಇನ್ನೂ ಶೋಧಕಾರ್ಯಾಚರಣೆ ನಡೆಸಲಾಗುತ್ತಿದ್ದು 11 ಜನರನ್ನು ವಶಕ್ಕೆ ಪಡೆಯಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ