ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿದೇಶ

ಅರುಣಾಚಲ ಪ್ರದೇಶಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ: ಚೀನಾ ಆಕ್ಷೇಪ

ಅರುಣಾಚಲ ಪ್ರದೇಶಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ.

ನಿರ್ಮಲಾ ಸೀತಾರಾಮನ್
Srinivas Rao BV
Updated On : 6 Nov 2017, 2:59 am
ಬೀಜಿಂಗ್: ಅರುಣಾಚಲ ಪ್ರದೇಶಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ. 
ವಿವಾದಿತ ಪ್ರದೇಶಕ್ಕೆ ಭಾರತದ ರಕ್ಷಣಾ ಸಚಿವರ ಭೇಟಿಯಿಂದ ಶಾಂತಿಗೆ ಪೂರಕವಾಗಿರುವುದಿಲ್ಲ ಎಂದು ಚೀನಾ ವಿದೇಶಾಂಗ ಇಲಾಖೆ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ. " ಅರುಣಾಚಲ ಪ್ರದೇಶಕ್ಕೆ ಭಾರತದ ರಕ್ಷಣಾ ಸಚಿವರು ಭೇಟಿ ನೀಡಿರುವುದರ ಬಗ್ಗೆ ಚೀನಾದ ನಿಲುವಿನ ಬಗ್ಗೆ ನಿಮಗೆ ಸ್ಪಷ್ಟತೆ ಇರಬೇಕು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.  
ನ.05 ರಂದು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ನಿರ್ಮಲಾ ಸೀತಾರಾಮನ್ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚೀನಾದ ವಿದೇಶಾಂಗ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು, ಭಾರತದ ರಕ್ಷಣಾ ಸಚಿವರ ಭೇಟಿಯಿಂದ ಶಾಂತಿಗೆ ಪೂರಕವಾಗಿರುವುದಿಲ್ಲ ಎಂದು ಹೇಳಿದೆ. 

Advertisement

Advertisement

ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಲು ಭಾರತ ಚೀನಾದೊಂದಿಗೆ ಕೆಲಸ ಮಾಡಬೇಕು, ಈ ಉದ್ದೇಶಕ್ಕಾಗಿ ಚೀನಾದೊಂದಿಗೆ ಭಾರತ ಕೈಜೋಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement