ನಯ್ಯರ್ ಇಕ್ಬಾಲ್ ರಾಣಾ 
ವಿದೇಶ

ಆಫ್ಘಾನಿಸ್ತಾನ: ಗುಂಡಿಟ್ಟು ಪಾಕಿಸ್ತಾನ ರಾಯಭಾರಿ ಅಧಿಕಾರಿಯ ಹತ್ಯೆ

ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ರಾಯಭಾರಿಯಾಗಿರುವ ನಯ್ಯರ್ ಇಕ್ಬಾಲ್ ರಾಣಾ ಅವರನ್ನು ಅನಾಮಧೇಯ ವ್ಯಕ್ತಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ...

ಇಸ್ಲಾಮಾಬಾದ್: ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ರಾಯಭಾರಿಯಾಗಿರುವ ನಯ್ಯರ್ ಇಕ್ಬಾಲ್ ರಾಣಾ ಅವರನ್ನು ಅನಾಮಧೇಯ ವ್ಯಕ್ತಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ.

ಅಫ್ಘಾನಿಸ್ತಾನದ ಪೂರ್ವ ಜಲಾಲಾಬಾದ್ ನಗರದಲ್ಲಿರುವ ಪಾಕಿಸ್ತಾನ ರಾಯಭಾರಿ ನಯ್ಯರ್ ಇಕ್ಬಾಲ್ ರಾಣಾ ಅವರ ನಿವಾಸದ ಬಳಿ ಬಂದಿರುವ ದುಷ್ಕರ್ಮಿಗಳ ತಂಡವೊಂದು ರಾಣಾ ಅವರ ಮೇಲೆ ಏಕಾಏಕಿ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆಂದು ಪಾಕಿಸ್ತಾನ ರಾಯಭಾರಿ ಮೂಲಗಳು ಮಾಹಿತಿ ನೀಡಿದೆ. 

ಬೈಕ್ ನಲ್ಲಿ ಬಂದಿರುವ ಇಬ್ಬರು ಶಸ್ತ್ರಾಸ್ತ್ರಧಾರಿಗಳು ರಾಣಾ ಅವರ ಮೇಲೆ ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. 

ರಾಯಭಾರಿ ಕಚೇರಿಯಿಂದ ರಾಣಾ ಅವರು ಮನೆಗೆ ತೆರಳಿದ್ದರು. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ರಾಣಾ ಅವರ  ಮೇಲೆ ಬೈಕ್ ನಲ್ಲಿ ಬಂದಿರುವ ಇಬ್ಬರು ಶಸ್ತ್ರಾಸ್ತ್ರಧಾರಿಗಳು ಗುಂಡು ಹಾರಿಸಿದ್ದಾರೆ. ರಾಣಾ ಅವರ ದೇಹದೊಳಗೆ ಎರಡು ಗುಂಡುಗಳು ಹೊಕ್ಕಿತ್ತು. ಬಳಿಕ ಅಧಿಕಾರಿಗಳು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. 

ಪಾಕಿಸ್ತಾನದಲ್ಲಿರುವ ರಾಯಭಾರಿ ಮತ್ತು ಆಫ್ಘಾನಿಸ್ತಾನದ ರಾಯಭಾರಿ ಕಚೇರಿಯಲ್ಲಿರುವ ಪಾಕಿಸ್ತಾನದ ಅಧಿಕಾರಿಗಳಿಗೆ ಜೀವ ಬೆದರಿಕೆಗಳಿದ್ದು, ಈ ವಿಚಾರವನ್ನು ಅಫ್ಘಾನ್ ಅಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel