ವಿದೇಶ

ಮಾತುಕತೆ ಪುನಾರಂಭಕ್ಕೆ ಭಾರತದ ಪ್ರತಿಕ್ರಿಯೆ ಎದುರು ನೋಡುತ್ತಿರುವ ಪಾಕಿಸ್ತಾನ

Srinivas Rao BV
ಇಸ್ಲಾಮಾಬಾದ್: ದ್ವಿಪಕ್ಷೀಯ ಮಾತುಕತೆ ಪುನಾರಂಭಕ್ಕೆ ಭಾರತದ ಪ್ರತಿಕ್ರಿಯೆಯನ್ನು ಎದುರು ನೋಡುತ್ತಿರುವುದಾಗಿ ಪಾಕಿಸ್ತಾನ ಹೇಳಿದೆ. 
ಜಮ್ಮು-ಕಾಶ್ಮೀರ- ಸಿಯಾಚಿನ್ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತುಕತೆ ನಡೆಸಲು ಭಾರತದಿಂದ ಪ್ರತಿಕ್ರಿಯೆಯನ್ನು ಎದುರು ನೋಡುತ್ತಿರುವುದಾಗಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸಲ್ ಹೇಳಿಕೆ ನೀಡಿದ್ದಾರೆ. 
ಇನ್ನು ಕುಲಭೂಷಣ್ ಜಾಧವ್ ಪ್ರಕರಣದ ಬಗ್ಗೆಯೂ ಪಾಕ್ ನ ವಿದೇಶಾಂಗ ಇಲಾಖೆ ವಕ್ತಾರರು ಮಾತನಾಡಿದ್ದು, ಜಾಧವ್ ಅವರನ್ನು ಭೇಟಿ ಮಾಡಲು ಅವರ ಪತ್ನಿಗೆ ಪಾಕಿಸ್ತಾನ ಅವಕಾಶ ನೀಡಲು ಮುಂದಾಗಿರುವುದರ ಬಗ್ಗೆಯೂ ಭಾರತದ ಪ್ರತಿಕ್ರಿಯೆಯನ್ನು ಬಯಸುತ್ತಿದ್ದೇವೆ ಎಂದಿದ್ದಾರೆ. 
ಇದೇ ವೇಳೆ ಭಾರತದಲ್ಲಿ ಕ್ರೂಸ್ ಕ್ಷಿಪಣಿ ಪರೀಕ್ಷೆ ನಡೆಸಿರುವುದರ ಬಗ್ಗೆ ಪಾಕಿಸ್ತಾನ ಆತಂಕ ವ್ಯಕ್ತಪಡಿಸಿದ್ದು, ಇದರಿಂದಾಗಿ ಪ್ರಾದೇಶಿಕ ಶಾಂತಿಗೆ ಧಕ್ಕೆ ಉಂಟಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. 
SCROLL FOR NEXT