ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಪ್ರತಿಕ್ರಿಯೆ ಸ್ವೀಕರಿಸಿದ್ದು, ಅದನ್ನು ಪರಿಗಣಿಸಲಾಗುತ್ತಿದೆ ಎಂದು ಶನಿವಾರ ಪಾಕಿಸ್ತಾನ ಹೇಳಿದೆ.
ಆಶ್ಚರ್ಯಕರ ಬೆಳವಣಿಗೆಯಲ್ಲಿ ಪಾಕಿಸ್ತಾನ ಕಳೆದ ವಾರ ಮಾನವೀಯ ಆಧಾರದ ಮೇಲೆ ಜಾಧವ್ ಅವರಿಗೆ ಅವರ ಪತ್ನಿ ಭೇಟಿ ಮಾಡಲು ಅನುಮತಿ ನೀಡಿತ್ತು. ಈ ಸಂಬಂಧ ಪಾಕಿಸ್ತಾನ ಭಾರತದ ಪ್ರತಿಕ್ರಿಯೆಯನ್ನು ಸ್ವೀಕರಿಸಿದ್ದು, ಅದನ್ನು ಪರಿಗಣಿಸಲಾಗುತ್ತಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರ ಮೊಹಮ್ಮದ್ ಫೈಸಾಲ್ ಅವರು ತಿಳಿಸಿದ್ದಾರೆ.
ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ಥಾನ ಭಾರತದ ಉತ್ತರವನ್ನು ಎದುರು ನೋಡುತ್ತಿದೆ ಎಂದು ಡಾ. ಫೈಸಲ್ ಅವರು ಈಚಿನ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ್ದರು.
ಕುಲಭೂಷಣ್ ಜಾಧವ್ ಅವರನ್ನು ಭೇಟಿ ಮಾಡಲು ಅವರ ತಾಯಿಗೆ ವೀಸಾ ನೀಡುವಂತೆ ಭಾರತ ಸರ್ಕಾರ ಹಲವು ಬಾರಿ ಮನವಿ ಮಾಡಿತ್ತು. ಭಾರತದ ಮನವಿಗೆ ಕೊನೆಗೂ ಸ್ಪರ್ಧಿಸಿದ ಪಾಕಿಸ್ತಾನ ಸರ್ಕಾರ, ಜಾಧವ್ ಅವರನ್ನು ಭೇಟಿ ಮಾಡಲು ಅವರ ಪತ್ನಿಗೆ ಅವಕಾಶ ನೀಡಿದೆ.
ಮಾನವೀಯ ಆಧಾರದ ಮೇಲೆ ಕುಲಭೂಷಣ್ ಜಾಧವ್ ಅವರು ತಮ್ಮ ಪತ್ನಿಯ ಭೇಟಿಗೆ ಅವಕಾಶ ಕಲ್ಪಿಸಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ ಎಂದು ಮೊಹಮ್ಮದ್ ಫೈಸಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದರು. ಅಲ್ಲದೆ ಈ ಕುರಿತು ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈಕಮಿಷನರ್ ಗೂ ಮಾಹಿತಿ ನೀಡಲಾಗಿತ್ತು.
ಕಳೆದ ಏಪ್ರಿಲ್ ನಲ್ಲಿ ಗೂಢಾಚಾರಿಕೆ ಮಾಡಿದ ಆರೋಪದ ಮೇಲೆ ಪಾಕಿಸ್ತಾನ ಸೇನಾ ಕೋರ್ಟ್ ಜಾಧವ್ ಗೆ ಗಲ್ಲು ಶಿಕ್ಷೆ ವಿಧಿಸಿದ್ದು, ಅದಕ್ಕೆ ಅಂತರಾಷ್ಟ್ರೀಯ ಕೋರ್ಟ್ ತಡೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics