ಹಫೀಜ್ ಸಯೀದ್ 
ವಿದೇಶ

26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಬಿಡುಗಡೆಗೆ ಪಾಕ್ ಕೋರ್ಟ್ ಆದೇಶ

26/11 ಘಟನೆಯ ವಾರ್ಷಿಕ ದಿನಕ್ಕೆ 4 ದಿನಗಳಿರುವಾಗಲೇ ದಾಳಿಯ ರೂವಾರಿ ಹಫೀಜ್ ಸಯೀದ್ ಬಿಡುಗಡೆಗೆ ಪಾಕಿಸ್ತಾನದ ನ್ಯಾಯಾಲಯವೊಂದು ಆದೇಶ ನೀಡಿದೆ.

ಲಾಹೋರ್: 26/11 ಘಟನೆಯ ವಾರ್ಷಿಕ ದಿನಕ್ಕೆ 4 ದಿನಗಳಿರುವಾಗಲೇ ದಾಳಿಯ ರೂವಾರಿ ಹಫೀಜ್ ಸಯೀದ್ ಬಿಡುಗಡೆಗೆ ಪಾಕಿಸ್ತಾನದ ನ್ಯಾಯಾಲಯವೊಂದು ಆದೇಶ ನೀಡಿದೆ. 
ಜೆಯುಡಿ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ನನ್ನು ಜನವರಿ 31 ರಿಂದ ಗೃಹ ಬಂಧನದಲ್ಲಿ ಇರಿಸಲಾಗಿತ್ತು. ಹಫೀಜ್ ಸಯೀದ್ ನೊಂದಿಗೆ ಆತನ ಸಹಚರರಾದ ಅಬ್ದುಲ್ ರೆಹಮಾನ್ ಅಬಿದ್ ಹಾಗೂ ಖಾಝಿ ಕಶಿಫ್ ಹುಸೇನ್ ನ್ನು ಪಂಜಾಬ್ ಸರ್ಕಾರ 1997 ರ ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ 90 ದಿನಗಳು ಬಂಧಿಸಿಟ್ಟಿತ್ತು. 
ಜೆಯುಡಿ ಉಗ್ರ ಸಂಘಟನೆ ನಿಷೇಧಿತ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಭಾಗವಾಗಿದ್ದು, 2008ರ ಮುಂಬೈ ದಾಳಿಗೆ ಇದೇ ಉಗ್ರ ಸಂಘಟನೆ ಕಾರಣವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್