ವಿಮಾನ ಪತನ 
ವಿದೇಶ

ನೇಪಾಳದಲ್ಲಿ ವಿಮಾನ ಪತನ: 16 ಮಂದಿಗೆ ಗಾಯ

ಚುನಾವಣೆ ಕೆಲಸ ನಿಮಿತ್ತ ಹದಿಮೂರು ಪೊಲೀಸರು ತೆರಳುತ್ತಿದ್ದ ಚಿಕ್ಕ ವಿಮಾನವೊಂದು ಟೆಕ್ ಆಫ್ ವೇಳೆ ಅಪಘಾತಕ್ಕೀಡಾಗಿದ್ದು ಈ ಅಪಘಾತದಲ್ಲಿ 16 ಮಂದಿಗೆ...

ಕಾಠ್ಮಂಡು: ಚುನಾವಣೆ ಕೆಲಸ ನಿಮಿತ್ತ ಹದಿಮೂರು ಪೊಲೀಸರು ತೆರಳುತ್ತಿದ್ದ ಚಿಕ್ಕ ವಿಮಾನವೊಂದು ಟೆಕ್ ಆಫ್ ವೇಳೆ ಅಪಘಾತಕ್ಕೀಡಾಗಿದ್ದು ಈ ಅಪಘಾತದಲ್ಲಿ 16 ಮಂದಿಗೆ ಗಾಯಗಳಾಗಿವೆ. 
ನೇಪಾಳದ ಪರ್ವತ ಪ್ರದೇಶ ಹುಮ್ಲಾ ಜಿಲ್ಲೆಯ ಸಿಮಿಕೋಟ್ ವಿಮಾನ ನಿಲ್ದಾಣದಲ್ಲಿ ಈ ಅಪಘಾತ ಸಂಭವಿಸಿದೆ. ವಿಮಾನ ಟೇಕ್ ಆಫ್ ಆಗುತ್ತಿದ್ದಾಗ ವಿಮಾನ ಟೈಯರ್ ಸ್ಫೋಟಗೊಂಡಿದ್ದು ವಿಮಾನ ಅಪಘಾತಕ್ಕೆ ಕಾರಣವಾಗಿದೆ ಎಂದು ಮುಖ್ಯ ಎಐಜಿ ರಾಣಾ ಬಹದ್ದೂರ್ ಚಂದ್ ಹೇಳಿದ್ದಾರೆ. 
ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ವಿಮಾನ ಸಂಪೂರ್ಣ ನಜ್ಜುಗುಜ್ಜಾಗಿದೆ. ವಿಮಾನ ಪೈಲಟ್ ಬಸಂತ್ ಲಾಮಾ ತಲೆಗೆ ಬಲವಾದ ಗಾಯವಾಗಿದ್ದು ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. 
ಒಟ್ಟಾರೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 13 ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಹುಮ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!