ವಿದೇಶ

ಲಾಸ್ ವೆಗಾಸ್ ಸಾಮೂಹಿಕ ಗುಂಡಿನ ದಾಳಿಯ ಹೊಣೆ ಹೊತ್ತ ಐಸಿಸ್

Lingaraj Badiger
ಲಾಸ್ ವೆಗಾಸ್: ಅಮೆರಿಕದ ಲಾಸ್ ವೆಗಾಸ್ ನ ಸಂಗೀತ ಕಾರ್ಯಕ್ರಮದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.
ಗುಂಡಿನ ದಾಳಿಗೆ ಸಂಬಂಧಿಸಿದಂತೆ ಐಸಿಸ್ ಉಗ್ರ ಸಂಘಟನೆ ಸೋಮವಾರ ಅಮಖ್ ಸುದ್ದಿ ಸಂಸ್ಥೆಗೆ ಎರಡು ಪ್ರಕಟಣೆಗಳನ್ನು ಬಿಡುಗಡೆ ಮಾಡಿದ್ದು, ಇರಾಖ್ ಮತ್ತು ಸೀರಿಯಾದ ಉಗ್ರರ ಮೇಲಿನ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ. 
ಭಾನುವಾರ ರಾತ್ರಿ ಮಂಡಾಲೇ ಬೇ ಕ್ಯಾಸಿನೋದಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಕನಿಷ್ಠ 50 ಮಂದಿ ಮೃತಪಟ್ಟಿದ್ದಾರೆ ಮತ್ತು 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಗುಂಡಿನ ದಾಳಿಯಿಂದ ಗಾಯಗೊಂಡ ಹಲವಾರು ಜನರನ್ನು ಲಾಸ್ ವೆಗಾಸ್ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಘಟನೆ ಕುರಿತಾಗಿ ನನಗೆ ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬಂದಿಲ್ಲ ಎಂದು ಯುನಿವರ್ಸಿಟಿ ಮೆಡಿಕಲ್ ಸೆಂಟರ್ ನ  ವಕ್ತಾರ ಡ್ಯಾನಿಟಾ ಕೋಹೆನ್ ಅವರು ಹೇಳಿದ್ದಾರೆ.
SCROLL FOR NEXT